ಬೆಂಗಳೂರು: ಮಹಾನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಮರ ಬಿದ್ದು ಯುವತಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಲಕ್ಷ್ಮೀದೇವಿ ನಗರದಲ್ಲಿ ಶಿಲ್ಪಾ (21) ಮತ್ತು ಬೇಗೂರಿನಲ್ಲಿ ಹೇಮಾ (45) ಎಂಬುರೆಗೆ ಮಳೆಯ ಅವಂತರದಿಂದ ಮೃತಪಟ್ಟವರು. ನಗರದ ಬೇಗೂರು ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಮರದ ರೆಂಬೆ ಮುರಿದುಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೊಮ್ಮನಹಳ್ಳಿಯ ಬೇಗೂರಿನಲ್ಲಿ ಮಳೆಯಿಂದ ಪಾರಾಗಲು ಹೇಮಾ (45) ಸ್ಕೂಟಿಯಲ್ಲಿ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ರಭಸವಾಗಿ ಬೀಸಿದ ಗಾಳಿಯಿಂದ ಮರ ಕೆಳಗೆ ಉರುಳಿದ್ದು, ಅದರ ರೆಂಬೆಗಳು ಹೇಮಾ ಅವರ ಸ್ಕೂಟಿಯ ಮೇಲೆ ಬಿದ್ದಿವೆ. ರೆಂಬೆಗಳ ಅಡಿಯಲ್ಲಿ ಸಿಲುಕಿದ ಹೇಮಾ ಅವರನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ. ಪರಿಣಾಮ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮತ್ತೊಂದೆಡೆ ಬೆಂಗಳೂರಿನ ಲಕ್ಷ್ಮೀದೇವಿ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಇಟ್ಟಿಗೆ ಕಲ್ಲು ಕೆಳಗೆ ಬಿದ್ದು 21 ವರ್ಷದ ಶಿಲ್ಪಾ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಮನೆಯಲ್ಲೇ ಆಫೀಸ್ ಕೆಲಸ ಮಾಡುತ್ತಿದ್ದಾಗ ಮನೆ ಪಕ್ಕದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲಿಂದ ಇಟ್ಟಿಗೆ ಆಕೆ ತಲೆ ಮೇಲೆ ಬಿದ್ದಿದೆ. ಅದನ್ನು ಗಮನಿಸಿದ ಮನೆಯವರು ಸ್ಥಳೀಯರ ಸಹಾಯದಿಂದ ಕೂಡಲೇ ಆಸ್ಪತ್ರೆಗೆ ಯುವತಿಯನ್ನು ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಯುವತಿ ಮೃತಪಟ್ಟ ಸಂಬಂಧ ಲಕ್ಷ್ಮೀದೇವಿ ನಗರಕ್ಕೆ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ ಮೃತ ಯುವತಿಯ ಮನೆಯವರಿಗೆ ಸಾಂತ್ವನ ಹೇಳಿದರು. ನಂತರ ಘಟನೆ ಸಂಬಂಧ ಮಾಹಿತಿ ಕಲೆಹಾಕಿದ ಅವರು, ಈ ಕುರಿತು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail