CrimeNEWSನಮ್ಮಜಿಲ್ಲೆನಮ್ಮರಾಜ್ಯ

ಡಿಜೆ ಹಳ್ಳಿ ಗಲಭೆ: ಮತ್ತೆ 35 ಮಂದಿ ಬಂಧನ, 340ಕ್ಕೇರಿದ ಬಂಧಿತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಇದುವರೆಗೆ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇದೇ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. ನಿನ್ನೆ ಒಂದೇ ದಿನ 85 ಮಂದಿಯನ್ನು ಬಂಧಿಸಿದ್ದು, ಇಂದು ಮತ್ತೆ 35 ಮಂದಿಯನ್ನು ಬಂಧಿಸಿದ್ದಾರೆ.

ಇನ್ನು ಬಂಧಿತರು ನೀಡಿರುವ ಮಾಹಿತಿ ಮೇರೆಗೆ ಮತ್ತಷ್ಟು ಮಂದಿಯನ್ನು ಪೊಲೀಸರು ಬಂಧಿಸಲಿದ್ದಾರೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಪೊಲೀಸರು 45 ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವವರಿಗಾಗಿ ಶೋಧ ನಡೆಸುತ್ತಿದ್ದು, ಬಂಧಿತರ ಸಂಖ್ಯೆ 1 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಎಂದು ಪೊಲೀಸ್‌ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?