CrimeNEWSನಮ್ಮರಾಜ್ಯಸಿನಿಪಥ

ಗಾಂಜಾ ನಂಟು: ಸ್ಯಾಂಡಲ್‌ವುಡ್‌ನಲ್ಲೂ ನಶೆಯುಂಟು !

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೆರೆಯ ಆಂಧ್ರ ಪ್ರದೇಶದಿಂದ ಬೆಂಗಳೂರಿಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕೋಟಿ ರೂ. ಮೌಲ್ಯದ 2 ಕ್ವಿಂಟಾಲ್ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರಿನ ಸಮೀರ್, ಕೈಸರ್ ಪಾಷಾ ಮತ್ತು ಚಿಕ್ಕಬಳ್ಳಾಪುರದ ಇಸ್ಮಾಯಿಲ್ ಶರೀಫ್ ಬಂಧಿತರು. ಆರೋಪಿಗಳಿಂದ 204 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಮೂರು ಮೊಬೈಲ್ ಗಳು, ಒಂದು ಲಾರಿ ಮತ್ತು ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸಮೀರ್ ಎಂಬವನು ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯಿಂದ ಕಂಟೈನರ್ ನಲ್ಲಿ ಗಾಂಜಾ ತುಂಬಿಸಿಕೊಂಡು ತನ್ನ ಸಹಚರರೊಂದಿಗೆ ಬೆಂಗಳೂರಿಗೆ ಆಗಮಿಸಿದ್ದ. ಆರೋಪಿಗಳು ಕಂಟೈನರ್ ನಲ್ಲಿ ತಂದ ಗಾಂಜಾವನ್ನು ನಗರದ ಹೊರವಲಯದ ದೇವನಹಳ್ಳಿ ಬಳಿ ಇಂಡಿಗೋ ಕಾರ್ ಗೆ ವರ್ಗಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ತಂದಿದ್ದ ಗಾಂಜಾವನ್ನು ಬೆಂಗಳೂರು, ಮೈಸೂರು, ರಾಮನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸರಬರಾಜು ಮಾಡಲು ಸಿದ್ದನಾಗುತ್ತಿದ್ದ. ಇದಲ್ಲದೆ ತಮಿಳು ನಾಡು ಕೇರಳ ರಾಜ್ಯದಲ್ಲೂ ಗಾಂಜಾ ಸರಬರಾಜು ಮಾಡುತ್ತಿದ್ದರು ಎನ್ನಲಾಗಿದೆ.

ಸ್ಯಾಂಡಲ್ ವುಡ್ಗೆ ನಂಜಿನ ನಶೆ
ಸ್ಯಾಂಡಲ್ ವುಡ್ ನಶೆ ನಂಜಿನ ಬಗ್ಗೆ ಮಾಹಿತಿ ಸ್ಪೋಟವಾಗಿದೆ. ಎನ್ ಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಈ ಮಾಹಿತಿ ಬಯಲಾಗಿದ್ದು, 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂ. ಅನೂಪ್, ಆರ್ ರವೀಂದ್ರನ್ ಮತ್ತು ಡಿ.ಅನಿಖಾ ಎಂಬುವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳು ಪ್ರಮುಖ ಸಂಗೀತಗಾರರು, ನಟರು ಮತ್ತು ಕಾಲೇಜು ವಿದ್ಯಾರ್ಥಿಗಳು ಸೇರಿ ಸಮಾಜದ ಶ್ರೀಮಂತ ವರ್ಗಗಳಿಗೆ ಮಾದಕ ಔಷಧಗಳನ್ನು ಸರಬರಾಜು ಮಾಡುತ್ತಿದ್ದಾಗಿ ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ ಸಿಬಿ) ಅಧಿಕಾರಿಗಳು ಆಗಸ್ಟ್ 21ರಂದು ಬೆಂಗಳೂರಿನ ಕಲ್ಯಾಣ್ ನಗರದ ಹೋಟೆಲ್ ಒಂದರಲ್ಲಿ ದಾಳಿ ಮಾಡಿ 2.20 ಲಕ್ಷ ರೂ. ನಗದು, 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿತ್ತು. ದಾಳಿಯ ಮುಂದುವರಿದ ಭಾಗವಾಗಿ ನಗರದಲ್ಲಿ ಮತ್ತೊಂದು ದಾಳಿಯಲ್ಲಿ 96 ಎಂಡಿಎಂಎ ಮಾತ್ರೆಗಳನ್ನು ಮತ್ತು 180 ಎಲ್ ಎಸ್ಡಿ ಬ್ಲಾಟ್ಸ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಂತರ ಅಧಿಕಾರಿಗಳು ಮತ್ತೊಂದು ದಾಳಿ ನಡೆಸಿದ್ದು, ಪ್ರಖರಣದ ಪ್ರಮುಖ ಕಿಂಗ್ ಪಿನ್ ಆಗಿದ್ದ ಮಹಿಳೆ ಮನೆಗೆ ದಾಳಿ ಮಾಡಿ 270 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?