ಬೆಂಗಳೂರು: ಬೆಂಗಳೂರಿನಲ್ಲಿನ ಗಲಭೆ ಪ್ರಕರಣ ತೀವ್ರ ಖಂಡನೀಯ. ಸಮಾಜದ ಸ್ವಾಸ್ಥ್ಯ ಕದಡುವುದರಿಂದ ಯಾರಿಗೂ ಉಪಯೋಗವಿಲ್ಲ,ಎಲ್ಲರಿಗೂ ನಷ್ಟ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಕೆಜಿ ಹಳ್ಳಿ ಘಟನೆ ಖಂಡಿಸಿ ಟ್ವೀಟ್ ಮಾಡಿಉರವ ಅವರು, ಪ್ರಚೋದನೆ ಮಾಡುವುದು ತಪ್ಪು, ಪ್ರಚೋದಿತರಾಗಿ ಸಾರ್ವಜನಿಕರು, ಪೊಲೀಸರು, ಪತ್ರಕರ್ತರು ಹೀಗೆ ಎಲ್ಲರ ಮೇಲೆ ಹಲ್ಲೆ ಮಾಡಿ ಗಲಾಟೆ ಮಾಡುವುದೂ ತಪ್ಪು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.