CrimeNEWSಸಿನಿಪಥ

ಡ್ರಗ್ಸ್‌ ಜಾಲದ ಸುಳಿಯಲ್ಲಿ ದಿಗಂತ್‌, ಐಂದ್ರಿತಾ ರೇ: ಸಿಸಿಬಿಯಿಂದ ನೋಟಿಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್‌ ದಂಪತಿ ದಿಗಂತ್‌, ಐಂದ್ರಿತಾ ರೇಗೆ ಸಿಸಿಬಿ ನೋಟಿಸ್‌ ಜಾರಿ ಮಾಡಿದೆ. ಬುಧವಾರ ಬೆಳಗ್ಗೆ 11 ಗಂಟೆಗೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿಲಾಗಿದೆ.

ಎರಡು ದಿನಗಳ ಹಿಂದೆ ನಟಿ ಐಂದ್ರಿತಾ ರೇಯವರು ಶ್ರೀಲಂಕಾದ ಕ್ಯಾಸಿನೋಗೆ ಹೋಗಿದ್ದ ವಿಡಿಯೋ, ಫೋಟೋ ವೈರಲ್‌ ಆಗಿತ್ತು. ಈ ವೇಳೆ ಈ ಪ್ರಕರಣದ ಆರೋಪಿ ಶೇಖ್‌ ಫಾಝಿಲ್‌ ಜತೆ ಇದ್ದ ಫೋಟೋಗಳು ಸಹ ಸಿಕ್ಕಿತ್ತು.

ನಾನು ಸಿನಿಮಾ ಪ್ರಮೋಶನ್ ಗಾಗಿ ಕೊಲಂಬೋದಲ್ಲಿರುವ ಕ್ಯಾಸಿನೋಗೆ ಹೋಗಿದ್ದೆ. ಚಿತ್ರ ಪ್ರಚಾರಕ್ಕಾಗಿ ನಮ್ಮ ಮ್ಯಾನೇಜರ್ ಹೋಗಬೇಕು ಅಂತ ಹೇಳಿದ್ದರಿಂದ ಸೊಹೈಲ್ ಮತ್ತು ಅರ್ಬಾಜ್ ಖಾನ್ ಜೊತೆ ಹೋಗಿದ್ದೇನೆ. ಶೇಖ್ ಫಾಝಿಲ್ ನನಗೆ ವೈಯಕ್ತಿಯ ಪರಿಚಯವಿಲ್ಲ ಎಂದು ದೃಶ್ಯ ಮಾಧ್ಯಮವೊಂದಕ್ಕೆ ಐಂದ್ರಿತಾ ರೇ ತಿಳಿಸಿದ್ದಾರೆ.

ಅರ್ಬಾಜ್ ಖಾನ್ ಜತೆ ‘ಮೇ ಜರೂರ್ ಆವೂಂಗಾ’ ಸಿನಿಮಾ ಮಾಡುತ್ತಿರುವಾಗ ಕ್ಯಾಸಿನೋಗೆ ಹೋಗಿದ್ದೇನೆ. ಅಲ್ಲಿ ಸಿನಿಮಾ ಪ್ರಮೋಶನ್ ಚೆನ್ನಾಗಿ ಆಗುತ್ತೆ ಅಂತಾ ಹೇಳಿದ್ದರಿಂದ ಚಿತ್ರತಂಡ ನಮ್ಮನ್ನ ಕ್ಯಾಸಿನೋಗೆ ಕಳುಹಿಸಿದ್ದರು. ಕ್ಯಾಸಿನೋ ಪಾರ್ಟಿಗೆ ತೆರಳಿರುವ ಫೋಟೋಗಳು ನನ್ನ ಇನ್‍ಸ್ಟಾಗ್ರಾಂನಲ್ಲಿವೆ. ಯಾವ ಫೋಟೋ ಮತ್ತು ವಿಡಿಯೋಗಳನ್ನ ಡಿಲೀಟ್ ಮಾಡಿಲ್ಲ. ಪ್ರೊಫೆಷನಲ್ ಗಾಗಿ ಕ್ಯಾಸಿನೋಗೆ ಹೋಗಿದ್ದೆ, ಎರಡು ಬಾರಿ ಸ್ಟೆಪ್ ಹಾಕಿ ಬಂದಿದ್ದೇನೆ. ಕರೀಷ್ಮಾ ಕಪೂರ್, ಸೊಹೈಲ್ ಖಾನ್, ಅರ್ಬಾಜ್ ಖಾನ್ ಜತೆ ನನ್ನ ಜತೆ ಬಂದಿದ್ದರು ಎಂದು ವಿವರಿಸಿದ್ದರು.

ಎರಡನೇ ಬಾರಿ ಅರ್ಬಾಜ್ ಖಾನ್ ಹುಟ್ಟುಹಬ್ಬದ ಅಂಗವಾಗಿ ಬೆಂಗಳೂರಿನ ಹೋಟೆಲ್ ನಲ್ಲಿ ಪಾರ್ಟಿ ಮಾಡಲಾಗಿತ್ತು. ಬರ್ತ್ ಡೇ ಪಾರ್ಟಿ ವೇಳೆ ಫಾಝಿಲ್ ಬಂದಿದ್ದ. ಆದ್ರೆ ಅವನನ್ನ ನಾನು ಭೇಟಿಯಾಗಿರಲಿಲ್ಲ. ಪಾರ್ಟಿಯಲ್ಲಿದ್ದಾಗ ಸಹಜವಾಗಿ ಫಾಝಿಲ್ ಜತೆ ಫೋಟೋ ತೆಗೆಸಿಕೊಳ್ಳಲಾಗಿತ್ತು.

ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿವೆ. ಎರಡು ಬಾರಿಯೂ ಅರ್ಬಾಜ್ ಖಾನ್ ಮೂಲಕವೇ ಫಾಝಿಲ್ ಭೇಟಿಯಾಗಿದೆ. ಅರ್ಬಾಜ್ ಖಾನ್ ಬರ್ತ್ ಡೇ ಪಾರ್ಟಿ ವೇಳೆ ಮಾಧ್ಯಮದವರು ಸಹ ಇದ್ರು. 10 ರಿಂದ 20 ನಿಮಿಷ ನಾನು ಅಲ್ಲಿದ್ದು ಹೊರ ಬಂದಿದ್ದೇನೆ. ಆಗ ಯಾರಿಗೂ ಫಾಝಿಲ್ ಬಗ್ಗೆ ನಮಗೂ ಗೊತ್ತಿರಲಿಲ್ಲ ಎಂದು ತಿಳಿಸಿದರು.

ಶ್ರೀಲಂಕಾದ ಕ್ಯಾಸಿನೋಗೆ ಹಬ್ಬದ ಸಮಯದಲ್ಲಿ ಸಿನಿಮಾದ ದೊಡ್ಡ ದೊಡ್ಡ ತಾರೆಯರನ್ನ ಕರೆಸುತ್ತಾರೆ. ನಮಗೂ ಆ ರೀತಿಯ ಆಹ್ವಾನಗಳು ಬರುತ್ತವೆ. ಆಹ್ವಾನ ಬಂದಾಗ ಆ ವ್ಯಕ್ತಿಯ ಹಿನ್ನೆಲೆ ಚೆಕ್ ಮಾಡಲು ಆಗಲ್ಲ. ಪಾರ್ಟಿಗಳಲ್ಲಿ ಫೋಟೋ ತೆಗೆದುಕೊಳ್ಳುವಾಗ ಪ್ರತಿಯೊಬ್ಬರ ಹಿನ್ನೆಲೆ ಕೇಳಲು ಆಗಲ್ಲ. ಫೋಟೋ ತೆಗೆದುಕೊಂಡವರು ತಪ್ಪು ಮಾಡಿದ್ರೆ ನಮ್ಮನ್ನ ಪ್ರಶ್ನೆ ಮಾಡೋದು ಎಷ್ಟು ಸರಿ ಎಂದು ಐಂದ್ರಿತಾ ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ