CrimeNEWSನಮ್ಮಜಿಲ್ಲೆರಾಜಕೀಯ

ಮೈಸೂರು: ಡಾ. ನಾಗೇಂದ್ರ ಆತ್ಮಹತ್ಯೆ ತನಿಖೆಗೆ ಸಿಎಂ ಬಿಎಸ್‌ವೈ ಆದೇಶ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಮನನೊಂದ  ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲು ಬಂದಿದ್ದ ವೇಳೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಸಾವಿಗೆ ಹಿರಿಯ ಅಧಿಕಾರಿಗಳ ಒತ್ತಡವೇ ಕಾರಣ ಎಂದು ಆರೋಪಿಸಿ ವೈದ್ಯರು ಪ್ರತಿಭಟನೆ ಮಾಡಿ ಕಿರುಕುಳ ನೀಡಿದ ಅಧಿಕಾರಿಯ ವಿರುದ್ಧ ಕೇಸು ದಾಖಲಿಸಿ, ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಕ್ಕೆ.ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚಿಸಿದ್ದಾರೆ.

ಇನ್ನು ಅಧಿಕಾರಿಗಳ ಕಿರುಕುಳದಿಂದ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರೆ ಅಂಥ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದು, ಪ್ರಾದೇಶಿಕ ಆಯುಕ್ತರು 7 ದಿನದೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಮೈಸೂರಿನ ಆಲನಹಳ್ಳಿ ಬಡಾವಣೆಯ ತಮ್ಮ ನಿವಾಸದಲ್ಲಿ  ಗುರುವಾರ ಬೆಳಗ್ಗೆ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ  ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನಜರಬಾದ್‌ನಲ್ಲಿರುವ ಡಿಎಚ್‌ಒ ಕಚೇರಿ  ಡಾ. ನಾಗೇಂದ್ರ ಅವರ ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸಿ, ಕರ್ತವ್ಯದಲ್ಲಿನ ಒತ್ತಡ ಹಾಗೂ ಕಿರುಕುಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?