ಬೆಂಗಳೂರು: ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜತೆ ಸಭೆ ಕರೆದಿದ್ದೇನೆ. ಕೋವಿಡ್ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್ ಯೋಧರ ಜತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ.
ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯ ಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ ಎಂದಿದ್ದಾರೆ.
ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿಯನ್ನು ತುಂಬುವ ಜತೆಗೆ ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್ ಯೋಧರ ಜೊತೆ ಸರ್ಕಾರ ಇದೆ ಎಂದು ಹೇಳಲು ಇಚ್ಛಿಸುತ್ತೇನೆ.(4/4)
— Dr Sudhakar K (@mla_sudhakar) August 20, 2020
Ene kodthiro devrge gothu