CrimeNEWSನಮ್ಮಜಿಲ್ಲೆನಮ್ಮರಾಜ್ಯ

ಡಿಜೆ ಹಳ್ಳಿ ಗಲಭೆ ಕಿಡಿಗೇಡಿಗಳ ತಕ್ಷಣ ಬಂಧಿಸಿ: ಸಿದ್ದು ಒತ್ತಾಯ  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡನ್ನೂ ವಿಪಕ್ಷ ನಾಯಕ ಸಿದ್ದರಾಮಯ್ಯ  ಖಂಡಿಸಿದ್ದಾರೆ.

ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ  ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ.

ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ.  ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು  ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ.  ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ