CrimeNEWS

ಲಕ್ಷ್ಮೀಸಾಗರದಲ್ಲಿ ಹೊತ್ತಿ ಉರಿದ ಮನೆ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಾಂಡವಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮೇಲುಕೋಟೆ ಹೋಬಳಿಯ ಲಕ್ಷ್ಮೀಸಾಗರದಲ್ಲಿ ಮನೆಯೊಂದು ಹೊತ್ತಿ ಉರಿದಿದ್ದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶವಾಗಿವೆ.

ಲಕ್ಷ್ಮೀಸಾಗರ ಗ್ರಾಮದ ಸಣ್ಣ ಹನುಮಂತೇಗೌಡ ಎಂಬುವರ ಪುತ್ರ ಪ್ರಕಾಶ್ ಎಂಬುವರಿಗೆ ಸೇರಿದ ಹೆಂಚಿನ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಶನಿವಾರ ಮಧ್ಯಾಹ್ನ 2.30ರ ಸಮಯದಲ್ಲಿ ಬೆಂಕಿಗೆ ಆಹುತಿಯಾಗಿದೆ.

ವಿಷಯ ತಿಳಿದು ಜನ ಸೇರುವಷ್ಟರಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲ ಆವರಿಸಿದ್ದು, ಮನೆಯ ಹೆಂಚು ಸಿಡಿದು ಜೋರಾಗಿ ಉರಿಯತೊಡಗಿತ್ತು. ತಕ್ಷಣ ಸ್ಥಳಕ್ಕೆ ಮೇಲುಕೋಟೆ ಎಸ್‌ಐ ಗಣೇಶ್, ಎಎಸ್‌ಐ ಜಯರಾಂ ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು.

ಆದರೆ ಮನೆಯ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, 200 ಗ್ರಾಂ ಚಿನ್ನಾಭರಣ, ಭತ್ತ ಸೇರಿದಂತೆ ಬೆಲೆ ಬಾಳುವ ವಸ್ತುಗಳು ಸುಟ್ಟುಹೋಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಮಾಲೀಕ ಪ್ರಕಾಶ್ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕಾಶ್ ಮನೆಯವರಿಗೆ ಕೊರೊನಾ ದೃಢಪಟ್ಟ ಕಾರಣ ಮೂಡಲಕೊಪ್ಪಲು ವಸತಿ ನಿಲಯದ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೆ ಬೀಗ ಹಾಕಿದ್ದ ವೇಳೆ ಶಾರ್ಟ್ ಸರ್ಕೂಟ್‌ನಿಂದ ಬೆಂಕಿ ಅವಘಡ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20ಕ್ಕೂ ಹೆಚ್ಚು ಮನೆಗಳ ಟಿ.ವಿ, ಫ್ರಿಜ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ನಾಶವಾಗಿದ್ದು, ಮೇಲುಕೋಟೆ ಆರ್‌ಐ, ವಿಎ ಮತ್ತಿತರರು ಭೇಟಿ ನೀಡಿ ಮಹಜರು ನಡೆಸಿದ್ದಾರೆ.

ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮೇಲುಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ