CrimeNEWSನಮ್ಮರಾಜ್ಯ

ಸರ್ಜಾ ಕುಟುಂಬ ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧತೆ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ಕುಟುಂಬ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಚಿರು ಸರ್ಜಾ ಸಾವಿನ ಬಗ್ಗೆ ಚಲನಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅನುಮಾನ ವ್ಯಕ್ತಪಡಿಸಿದ್ದರು. ಹೀಗಾಗಿ ಅವರ ವಿರುದ್ಧ ಕಾನೂನಿನಡಿ ತಕ್ಕ ಪಾಠಕಲಿಸಲು ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗುತ್ತಿದೆ ಎನ್ನಲಾಗಿದೆ.

ಸರ್ಜಾ ಕುಟುಂಬದಸ್ಥರು ಈ ಸಂಬಂಧ ಖ್ಯಾತ ವಕೀಲರೊಬ್ಬರನ್ನು ಸಂಪರ್ಕಿಸಿ ಮಾತುಕತೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ಚಿರಂಜೀವಿ ಸರ್ಜಾ ಸಾವಿನ ವಿಚಾರ ಎಳೆದು ತಂದಿದ್ದಕ್ಕೆ ಸರ್ಜಾ ಕುಟುಂಬದವರು ಇಂದ್ರಜಿತ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೇ ಸೋಮವಾರ ಸ್ಯಾಂಡಲ್‍ವುಡ್‍ನಲ್ಲಿ ಯಾರಿಗೆಲ್ಲಾ ಡ್ರಗ್ಸ್ ನಂಟಿದೆ, ಯಾರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಅನ್ನೋದರ ಬಗ್ಗೆ ಇಂದ್ರಜಿತ್ ಸಿಸಿಬಿ ಪೊಲೀಸರ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ.

ಚಿರು ಬಗ್ಗೆ ನೀಡಿದ್ದ ಹೇಳಿಕೆಯನ್ನು ವಾಪಸ್‌ ಪಡೆಯುತ್ತೇನೆ ಎಂದು ಸೋಮವಾರ ಇಂದ್ರಜಿತ್‌ ಹೇಳಿದ್ದು, ಚಿರಂಜೀವಿ ಸರ್ಜಾ ಯುವ ನಟರಾಗಿದ್ದರಿಂದಲೇ ನಾನು ಹೇಳಿದ್ದೆ. ಸರ್ಜಾ ಅವರ ಬಗ್ಗೆ ನನಗೆ ಹೆಚ್ಚು ನೋವಿದೆ. ಆದರೆ ಈ ಮೂಲಕ ಹೇಳುತ್ತಿರುವುದೇನೆಂದರೇ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಡ್ರಗ್ ಮಾಫಿಯಾ ಎಂಬುವುದು ಬಹುದೊಡ್ಡದಾಗಿದೆ. ಅದನ್ನು ಸಂಪೂರ್ಣವಾಗಿ ನಿಲ್ಲಿಸಲು ಆಗದಿದ್ದರೂ ಯುವ ಜನತೆಗೆ ಒಂದು ಸಂದೇಶ ರವಾನೆ ಆಗಲಿ ಎಂಬುವುದಷ್ಟೇ ನನ್ನ ಉದ್ದೇಶ ಎಂದು ಸ್ಪಷ್ಟಪಡಿಸಿದ್ದರು.

ಇಂದ್ರಜಿತ್‌ ಹೇಳಿಕೆಯಿಂದ ಮಾನಸಿಕ ವೇದನೆ ಅನುಭವಿಸುತ್ತಿರುವ ಕುಟುಂಬ ಇವರ ಕ್ಷಮೆಯಿಂದ ತೃಪ್ತರಾಗಿಲ್ಲ. ಹೀಗಾಗಿ ಸೂಕ್ತ ಪರಿಹಾರಕ್ಕೆ ಕಾನೂನು ಮೊರೆ ಹೋಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ