CrimeNEWSದೇಶ-ವಿದೇಶ

ವಿಧವೆ ಜತೆ ಏಕಾಂತ: ಇಬ್ಬರಿಗೂ ಥಳಿಸಿ, ತಲೆ ಬೋಳಿಸಿ ಮೆರವಣಿಗೆ

ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದ ಮಹಿಳೆ ಸಂಬಂಧಿಕರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಲಕ್ನೋ: ಪತಿ ಕಳೆದುಕೊಂಡ ಮಹಿಳೆ ಮತ್ತು ಅಂಗವಿಕಲನ ನಡುವೆ ಅಕ್ರಮ ಸಂಬಂಧವಿದ್ದು ಈ ಇಬ್ಬರೂ ಸ್ಥಳೀಯರಿಗೆ ಏಕಾಂತದಲ್ಲಿದ್ದಾಗ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ  ವಿಧವೆ (37) ಹಾಗೂ ಅಂಗವಿಕಲ(40) ಇಬ್ಬರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಮುಖಕ್ಕೆ ಮಸಿ ಬಳಿದು, ಥಳಿಸಿ ಊರು ತುಂಬಾ ಮೆರವಣಿಗೆ ಮಾಡಿ ಅಮಾನವೀಯವಾಗಿ ವರ್ತಿಸಿರುವ ಘಟನೆ ಸಮಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.

ಉತ್ತರ ಪ್ರದೇಶದ ಕಣ್ಣೌಜ್‍ನಲ್ಲಿ ಈ ಘಟನೆ ನಡೆದಿದ್ದು, ಐದು ಮಕ್ಕಳ ತಾಯಿ ಹಾಗೂ ಅಂಗವಿಕಲ ವ್ಯಕ್ತಿ ಇಬ್ಬರೂ ಏಕಾಂತದಲ್ಲಿದ್ದಾಗ ಮಹಿಳೆಯ ಚಿಕ್ಕಪ್ಪ ಹಾಗೂ ಆತನ ಮಕ್ಕಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ, ಈ ವೇಳೆ ಇಬ್ಬರನ್ನೂ ಲಾಕ್ ಮಾಡಿ, ನಂತರ ಮನಬಂದಂತೆ ಥಳಿಸಿ, ತಲೆ ಬೋಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಮುಖಕ್ಕೆ ಮಸಿ ಬಳಿದು ಊರ ತುಂಬ ಮೆರವಣಿಗೆ ಮಾಡಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಊರ ಮುಖಂಡರಿಗೆ ವಿಷಯ ತಿಳಿಸಿದ್ದು, ನಂತರ ಇಬ್ಬರನ್ನೂ ರಕ್ಷಿಸಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಟ್ಟ ಮಕ್ಕಳು ಅಮ್ಮನಿಗಾಗಿ ಕೂಗುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ರಾಕ್ಷರ ರೀತಿ ಅವರನ್ನು ಮೆರವಣಿಗೆ ಮಾಡಲಾಗಿದೆ.

ಈ ಕುರಿತು ಎಎಸ್‍ಪಿ ವಿನೋದ್ ಕುಮಾರ್ ಮಾಹಿತಿ ನೀಡಿ, ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸರು ಮಾಹಿತಿ ಪಡೆದಿದ್ದಾರೆ. ನಂತರ ಮಹಿಳೆಯ ಇಬ್ಬರು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಬುತ್ವ ವ್ಯವಸ್ಥೆಯಲ್ಲಿ ನಾವು ಕಾನೂನು ಪಾಲಿಸಬೇಕಿರುವುದು ಸತ್ಯ ಆದರೆ, ಕೆಲವೊಮ್ಮೆ ಅದನ್ನು ಮೀರಿದರೆ ಅದಕ್ಕೆ ತಕ್ಕ ಶಿಕ್ಷೆ ನೀಡಲು ನಮ್ಮ ಕಾನೂನಿನಡಿ ನಿಯವಿದೆ ಅದನ್ನು ಮೀರಿ ಈ ರೀತಿ ಸ್ವಯಂ ಪ್ರೇರಿತರಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ ಎಂಬುವುದು ಪ್ರಜ್ಞಾವಂತ ನಾಗರಿಕರ ಪ್ರಶ್ನೆಯಾಗಿದೆ.

1 Comment

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?