CrimeNEWSನಮ್ಮಜಿಲ್ಲೆ

ಮಂಡ್ಯ : ರಾತ್ರಿ ಇಡೀ ಎಣ್ಣೆ ಪಾರ್ಟಿ ಮಾಡಿದವರು ಬೆಳಗ್ಗೆ ಹೆಣವಾದರು

ಶ್ರೀರಂಗಪಟ್ಟಣದ ತಡಗವಾಡಿಯ ಬಸವರಾಜು,  ತುಮಕೂರಿನ ರಾಮಮೂರ್ತಿಯ ಹತ್ಯೆ 

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ರಾತ್ರಿ ಇಡೀ ಎಣ್ಣೆ ಪಾರ್ಟಿ ಮಾಡಿದ ಮೂವರಲ್ಲಿಇಬ್ಬರು ಹೆಣವಾಗಿ ಬಿದ್ದಿದ್ದು ಮತ್ತೊಬ್ಬನ ಸುಳಿವು ಸಿಕ್ಕಿಲ್ಲ. ಈ ಘಟನೆ ಮಂಡ್ಯ ತಾಲೂಕಿನ ಯಲಿಯೂರು ಇಟ್ಟಿಗೆ ಫ್ಯಾಕ್ಟರಿಯಲ್ಲಿ ಶುಕ್ರವಾರ ಮುಂಜಾನೆ ಜರುಗಿದ್ದು ಪಾರ್ಟಿ ಮಾಡಿದ ಮೂವರಲ್ಲಿ ಇಬ್ಬರನ್ನು ಆ ಮೂರನೇ ವ್ಯಕ್ತಿ ಹತ್ಯೆ ಮಾಡಿದ್ದಾನೆ ಎಂಬ ಅನುಮಾನ ಪೊಲೀಸರನ್ನು ಕಾಡುತ್ತಿದೆ.

ಘಟನೆ ವಿವರ: ಯಲಿಯೂರು ಸಮೀಪದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜು (44) ಹಾಗೂ ರಾಮಮೂರ್ತಿ (46) ಹತ್ಯೆಯಾದವರು. ಬಸವರಾಜು ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದವ. ರಾಮಮೂರ್ತಿ ಮೂಲತಃ ತುಮಕೂರಿನವ. ಇಬ್ಬರೂ 8 ವರ್ಷಗಳಿಂದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.

ಕಳೆದ ರಾತ್ರಿ ಇಬ್ಬರೂ ಬಾರ್‌ಗೆ ಹೋಗಿ ಎಣ್ಣೆ ತಂದು ಇಟ್ಟಿಗೆ ಫ್ಯಾಕ್ಟರಿಯಲ್ಲಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಇವರೊಂದಿಗೆ ಮತ್ತೊಬ್ಬ ಪಾರ್ಟಿಯಲ್ಲಿ ಇದ್ದ ಎನ್ನಲಾಗಿದೆ. ಆದರೆ ಆ ವ್ಯಕ್ತಿಯ ಬಗ್ಗೆ ಯಾರಿಗೂ ಸರಿಯಾದ ಮಾಹಿತಿ ಸಿಕ್ಕಿಲ್ಲ.

ಇನ್ನು ಪಾರ್ಟಿ ಮುಗಿಸಿ ರಾತ್ರಿ 2 ಗಂಟೆಯಲ್ಲಿ ನಿದ್ದೆಗೆ ಜಾರಿದ್ದಾರೆ. ಆದರೆ ಮುಂಜಾನೆ 5 ಗಂಟೆಯಲ್ಲಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ಅವರನ್ನು ಎಬ್ಬಿಸಲು ಬಂದು ನೋಡಿದಾಗ ಇಬ್ಬರೂ ಹೆಣವಾಗಿದ್ದ ದೃಶ್ಯ ಕಂಡು ಭಯಭೀತನಾಗಿ ಮಾಲೀಕನಿಗೆ ವಿಷಯ ತಿಳಿಸಿದ್ದಾನೆ.

ಮಾಲೀಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇಬ್ಬರನ್ನೂ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮಂಡ್ಯ ಎಸ್‍ಪಿ ಪರಶುರಾಮ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗಾರ ಯಾರು ಎಂಬ ಸುಳಿವು ಇನ್ನೂ ಸಿಕ್ಕಿಲ್ಲ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ