CrimeNEWSನಮ್ಮಜಿಲ್ಲೆ

ಮಂಡ್ಯ: ಅರ್ಕೇಶ್ವರ ದೇವಾಲಯದ ಅರ್ಚಕರ ಹತ್ಯೆಗೈದಿದ್ದ ಮೂವರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಗುತ್ತಲು ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಬರ್ಬರವಾಗಿ ಹತ್ಯೆ ಮಾಡಿ, ಹುಂಡಿಯ ಹಣ ಲೂಟಿ ಮಾಡಿದ್ದ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಆರೋಪಿಗಳು ಅರ್ಚಕರನ್ನುಹತ್ಯೆಮಾಡಿ ಆತಂಕ ಸೃಷ್ಟಿಸಿದ್ದ ಬಂಧಿತ ಆರೋಪಿಗಳನ್ನು ಆಂಧ್ರಪ್ರದೇಶದ ವಿಜಿ , ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಪರಾರಿಯಾಗಿದ್ದವರನ್ನು ಬಂಧಿಸುವುದು ಮಂಡ್ಯ ಪೊಲೀಸರಿಗೆ ಸವಾಲಾಗಿತ್ತು. ಆದರೆ ಒಂದು ಸಣ್ಣ ಸುಳಿವಿನ ಮೇರೆಗೆ ಕೊಲೆಗಾರರ ಕಾಲಿಗೆ ಗುಂಡಿಕ್ಕಿ  ಅವರ ಹೆಡೆಮುರಿಕಟ್ಟುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಜಿಲ್ಲೆಯ ಮದ್ದೂರು-ಮಳವಳ್ಳಿ ರಸ್ತೆಯ ಸಾದೊಳಲು ಗೇಟ್ ಬಳಿ ಆರೋಪಿಗಳು ಇದ್ದಾರೆ ಎಂಬ  ಖಚಿತ ಮಾಹಿತಿ ಮೇರೆಗೆ  ಬಂಧಿಸಲು ಹೊರಟಿದ್ದ ಪೊಲೀಸರ ಮೇಲೆ ಆರೋಪಿಗಳು ಚಾಕು, ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.  ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು,  ಗುಂಡಿನದಾಳಿಯಿಂದ ಗಾಯಗೊಂಡ ಮೂವರನ್ನು ಬಂಧಿಸಿದ್ದಾರೆ.

ಇನ್ನು ಘಟನೆಯಲ್ಲಿ ಪಿಎಸ್ಐ ಸೇರಿ ಇಬ್ಬರು ಪೇದೆಗಳಿಗೆ ಗಾಯವಾಗಿದೆ  ಗಾಯಾಳುಗಳಾದ ಅನಿಲ್ ಕುಮಾರ್ ಮತ್ತು ಕೃಷ್ಣಕುಮಾರ್​ ಅವರನ್ನು ಮದ್ದೂರು  ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್