CrimeNEWSನಮ್ಮರಾಜ್ಯ

ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆಗೆ ಮೊಟ್ಟೆ ತುಂಬಿದ ಟೆಂಪೋ ಪಲ್ಟಿ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಪಲ್ಟಿಯಾಗಿರುವ ಘಟನೆ ಘಾಟ್‌ನ ಮೂರನೇ ತಿರುವಿನಲ್ಲಿ ಬುಧವಾರ ಸಂಭವಿಸಿದೆ.

ನಿನ್ನೆ ಆರಂಭವಾಗಿರುವ ನಿಸರ್ಗ ಚಂಡಮಾರುತಕ್ಕೆ ಮಹಾರಾಷ್ಟ್ರ ಮತ್ತು ಗುಜರಾತ್‌ನ ಹಲವು ಪ್ರದೇಶಗಳು ನುಲುಗಿದ್ದು, ಆ ಮಾರುತಗಳ ಹೊಡೆತಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರುಯುತ್ತಿದೆ. ಇದರಿಂದ ಚಾಲಕನ ನಿಯಂತ್ರಣಕ್ಕೆ ಬಾರದ ಟೆಪೋ ಮಗುಚಿಬಿದ್ದಿದ್ದು ಅದೃಷ್ಟವಾಷಾತ್‌ ಯಾವುದೇ ಸಾವುನೋವು ಸಂಭವಿಸಿಲ್ಲ, ಟೆಂಪೋದಲ್ಲಿದ್ದ ಸಾವಿರಾರು ಮೊಟ್ಟೆಗಳು ನಾಶವಾಗಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಘಾಟ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಮಳೆಯ ಹೊಡೆತಕ್ಕೆ ಟೆಂಪೋ ಚಾಲಕನಿಗೆ ರಸ್ತೆ ಕಾಣಿಸದೆ ನಿಯಂತ್ರಣ ಕಳೆದುಕೊಂಡು ರಸ್ತೆಯ ಬಲಭಾಗಕ್ಕೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಟೆಂಪೋದಲ್ಲಿದ್ದ ಮೊಟ್ಟೆಗಳು ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಮಳೆ ಜೋರಾಗಿ ಬರುವ ವೇಳೆ ವಾಹನಗಳನ್ನು ಚಲಾಯಿಸಿಕೊಂಡು ಹೋಗುವುದು ಅಷ್ಟು ಸಮಂಜಸವಾದುದಲ್ಲ. ಆದ್ದರಿಂದ ಯಾರೆ ಅದರೂ ಇಂಥ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಕಡಿಮೆ ಅದ ಬಳಿಕ ಹೋಗುವುದು ಒಳ್ಳೆಯದು ಎಂದು ಸಾರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!