CrimeNEWS

ಹಲ್ಲೆಯಿಂದ ಮಾನಸಿಕ ಅಸ್ವಸ್ಥ ಮೃತ: 8 ಪೊಲೀಸರ ಅಮಾನತು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೊಡಗು‌: ಜಿಲ್ಲೆಯ ವಿರಾಜಪೇಟೆಯಲ್ಲಿ ಪೊಲೀಸರ ಹಲ್ಲೆಯಿಂದ ಮಾನಸಿಕ ಅಸ್ವಸ್ಥನೊಬ್ಬ ಅಸುನೀಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮದುಕರ್ ಪವಾರ್ ಆದೇಶಿಸಿದ್ದಾರೆ.

ಕಳೆದ ಬುಧವಾರ ರಾತ್ರಿ ಮಾನಸಿಕ‌ ಅಸ್ವಸ್ಥ ರಾಯ್ ಡಿಸೋಜ (50) ಎಂಬವರು ಕೈಯಲ್ಲಿ ಕತ್ತಿ ಹಿಡಿದು ಸಂಚರಿಸಿದ್ದರು ಎಂ ಕಾರಣಕ್ಕೆ ರಾಯ್ ಅವರನ್ನು ಠಾಣೆಗೆ ಕರೆದೊಯ್ದು ಪೊಲೀಸರು ಹಲ್ಲೆ ಮಾಡಿದ್ದರು. ಘಟನೆಯಿಂದ ತೀವ್ರವಾಗಿ ಗಾಯಗೊಂಡಿದ್ದ ರಾಯ್ ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದರು. ಈ ಸಂಬಂಧ ವ್ಯಾಪಕ ಖಂಡನೆ ವ್ಯಕ್ತವಾಗಿದ್ದಲ್ಲದೆ, ಸೂಕ್ತ ತನಿಖೆಗೆ ಕುಟುಂಬಸ್ಥರು ಹಾಗೂ ಕ್ರೈಸ್ತ ಸಂಘಟನೆ ಮತ್ತು ವಿವಿಧ ಪಕ್ಷಗಳ ಮುಖಂಡರು ಆಗ್ರಹಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಐಜಿಪಿ, ಇಬ್ಬರು ಹೆಡ್ ಕಾನ್‌ಸ್ಟೇಬಲ್ ಸೇರಿದಂತೆ 8 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಶೀಘ್ರದಲ್ಲೇ ಅಧಿಕಾರಿಗಳ ತಂಡ ಕೊಡಗಿಗೆ ಆಗಮಿಸಿ ತನಿಖೆ ನಡೆಸಲಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್