CrimeNEWSರಾಜಕೀಯಸಿನಿಪಥ

“ನಶೆಕೀಯ”- ಬಿಜೆಪಿ ಪರ ಚುನಾವಣೆ ಪ್ರಚಾರ ಮಾಡಿದ್ದಕ್ಕೆ ರಾಜಕೀಯ ಬಣ್ಣ ಸಲ್ಲ: ಸಂಸದ ಪ್ರತಾಪ್ ಸಿಂಹ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಜೆಡಿಎಸ್‌ ಮಾಜಿ ಸಚಿವ ಸಾರಾ ಮಹೇಶ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಕೊಡಗು ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ಸಿನಿಮಾ ತಾರೆಯರನ್ನು ಕರೆದುಕೊಂಡು ಬಂದು ಪ್ರಚಾರ ಮಾಡುವುದು ಸಾಮಾನ್ಯ. ಇದನ್ನು ಎಲ್ಲಾ ಪಕ್ಷಗಳು ಮಾಡಿವೆ. ಒಂದೇ ಚುನಾವಣೆಯಲ್ಲಿ ಸಿನಿಮಾ ತಾರೆಯರು ಮೂರು ಪಕ್ಷಗಳ ಕ್ಯಾಂಪೇನ್ ಮಾಡಿದ್ದಾರೆ ಎಂದರು.

ಕೆ.ಆರ್.ಪೇಟೆಯಲ್ಲಿ ಚುನಾವಣೆ ಸಂದರ್ಭದಲ್ಲಿ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಈ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಜತೆ ರಾಗಿಣಿ ಇರುವ ಫೋಟೋಗಳು ಇವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ನಿನ್ನೆ ಸಾರಾ ಮಹೇಶ್‌ ಅವರು ಬಿಜೆಪಿಯ ಸಖ್ಯ ಉಳ್ಳವರೇ ಡ್ರಗ್ಸ್‌ ದಂಧೆಯಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬೀಳುತ್ತಿದ್ದಾರೆ ಎಂಬ ಹೇಳಿಕೆಗೆ ಅವರ ಹೆಸರೇಳದೆ ಸಾರಾಗೆ ಪ್ರತಾಪ್ ಸಿಂಹ ಹೆಗಲು ಮುಟ್ಟಿಸಿದರು.

ಡ್ರಗ್ಸ್ ಅನ್ನೋದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷ ಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕಾಗಿದೆ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟ್ಟರ್‌ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದೆ. ಯಾವ ಪಕ್ಷ ಅಥವಾ ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದರು.

Leave a Reply

error: Content is protected !!
LATEST
KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್