ನಂಜನಗೂಡು: ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಮನನೊಂದ ಇಲ್ಲಿನ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ (43) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರಿನ ಆಲನಹಳ್ಳಿ ಬಡಾವಣೆಯ ತಮ್ಮ ನಿವಾಸದಲ್ಲಿ ಗುರುವಾರ ಬೆಳಗ್ಗೆ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.
ನಜರಬಾದ್‌ನಲ್ಲಿರುವ ಡಿಎಚ್‌ಒ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಶರಣಾದ ಡಾ. ನಾಗೇಂದ್ರ ಅವರ ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸಿದ ನೂರಾರು ವೈದ್ಯಕೀಯ ಸಿಬ್ಬಂದಿ, ಕರ್ತವ್ಯದಲ್ಲಿನ ಒತ್ತಡ ಹಾಗೂ ಕಿರುಕುಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ನಾಗೇಂದ್ರ ಸಾವಿನ ನೋವು ಒಬ್ಬ ವೈದ್ಯನಾಗಿ ನನಗೂ ಅರ್ಥವಾಗುತ್ತದೆ. ಶಾಂತಿ ಕಾಪಾಡಿ. ಕೋವಿಡ್ ಸಂಕಷ್ಟ ಕಾಲದಲ್ಲಿ ಸಂಯಮದಿಂದ ವರ್ತಿಸಿ. ನಾಗೇಂದ್ರ ಜನಪರ ಅಧಿಕಾರಿ,ಸಹೃದಯಿ, ಅತ್ಯಂತ ಸೂಕ್ಷ್ಮ ಸ್ವಭಾವದವರು ಎಂದು ತಿಳಿಯಿತು. ಅವರ ಸಾವಿನ ತನಿಖೆಗೆ ಆದೇಶಿಸಿದ್ದೇನೆ. ಅವರ ಕುಟುಂಬಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. pic.twitter.com/dm2rWEratH
— Dr Sudhakar K (@mla_sudhakar) August 20, 2020
ಮೈಸೂರಿನ ನಂಜನಗೂಡು ತಾಲೂಕಿನ ಕೋವಿಡ್ ವಾರಿಯರ್, ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್‌ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜತೆ ಹೇಳಿಕೊಳ್ಳಿ. ನಿಮ್ಮ ಕಷ್ಟಗಳಿಗೆ ಸರ್ಕಾರ ಯಾವತ್ತೂ ಜತೆಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮೈಸೂರಿನ ನಂಜನಗೂಡು ತಾ,ಕೋವಿಡ್ ವಾರಿಯರ್ ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯಿತು. ಅವರ ಸಾವು ನನಗೆ ಅತ್ಯಂತ ಬೇಸರ ತಂದಿದೆ. ಪ್ರೀತಿಯ ಕೊರೊನಾ ವಾರಿಯರ್ಸ್‌ಗಳಿಗೆ ನನ್ನದೊಂದು ಮನವಿ. ನಿಮಗೆ ಎಷ್ಟೇ ಒತ್ತಡಗಳಿದ್ದರೂ ನಿಮ್ಮ ಮೇಲಾಧಿಕಾರಿಗಳ ಜೊತೆ ಹೇಳಿಕೊಳ್ಳಿ. ನಿಮ್ಮಕಷ್ಟಗಳಿಗೆ ಸರ್ಕಾರ ಯಾವತ್ತೂಜೊತೆಗಿದೆ. pic.twitter.com/KGqILtCLTa
— Dr Sudhakar K (@mla_sudhakar) August 20, 2020