CrimeNEWSದೇಶ-ವಿದೇಶ

12ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 12 ವರ್ಷದ ಬಾಲಕಿಯ ಮೇಲೆ ಅಪರಿಚಿತ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸೆಗಿ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಪಶ್ಚಿಮ ದೆಹಲಿಯ ಪಾಸ್ಚಿಮ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

ಮನೆಯಲ್ಲಿ ಬಾಲಕಿಒಬ್ಬಳೆ ಇದ್ದ ಸಮಯನೋಡಿಕೊಂಡು ಹೋಗಿರುವ ಕಾಮುಕ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜತೆಗೆ ಬಾಲಕಿಯ ಮುಖ ಮತ್ತು ತಲೆಗೆ ಕತ್ತರಿಯಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ಸೇರಿಸಲಾಗಿದ್ದು ಆಕೆ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಪತ್ತೆಗಾಗಿ ಪೊಲೀಸರು ಅಕ್ಕಪಕ್ಕದ ಮನೆಯವರನ್ನು ವಿಚಾರಣೆ ಮಾಡುತ್ತಿದ್ದು,  ಹತ್ತಿರವಿರುವ  ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರೀಶೀಲನೆ ಮಾಡುತ್ತಿದ್ದಾರೆ.

ಬಾಲಕಿಯ ಪಾಲಕರು ಮತ್ತು ಸಹೋದರಿ ಹತ್ತಿರದ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಬಾಲಕಿ ಒಬ್ಬಳೆ ಮನೆಯಲ್ಲಿ ಇರುವ ಬಗ್ಗೆ ತಿಳಿದಿರುವ ಪರಿಚಿತನಿಂದಲೇ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬಾಲಕಿ ಕುಟುಂಬ ವಾಸವಿರುವ ಕಟ್ಟಡದಲ್ಲಿ ಕಾರ್ಖಾನೆಯ ಕಾರ್ಮಿಕರೇ ಹೆಚ್ಚಾಗಿ ಇದ್ದಾರೆ. ಪಾಲಕರು ನೀಡಿದ ದೂರಿನ ಮೇರೆಗೆ ಕೊಲೆಯತ್ನ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ  ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನ್ಯೂಡೆಲ್ಲಿ ಪೊಲೀಸ್ ವಕ್ತಾರ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್