ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟರಲ್ಲಿ ಒಬ್ಬರಾದ ರಾಕ್ಲೈನ್ ಸುಧಾಕರ್ ನಿಧನರಾಗಿದ್ದಾರೆ. ಸಿನಿಮಾ ಒಂದರ ಚಿತ್ರೀಕರಣ ಮಾಡುತ್ತಿದ್ದ ವೇಳೆ ಸೆಟ್ನಲ್ಲಿಯೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಇತ್ತೀಚೆಗಷ್ಟೆ ನಟ ರಾಕ್ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸಕ್ರಿಯರಾಗಿದ್ದರು.
ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ನಿರ್ದೇಶಕ ಸುನಿ ಮಾಹಿತಿ ನೀಡಿದ್ದಾರೆ.
2020ಯ ರೌದ್ರಾವತಾರ ಮುಂದುವರೆದಿದೆ..
ಸಿನಿಕಲಾವಿದರಾದ #Rocklinesudhakar ರವರು ಇಂದು ಮೇಕಪ್ ಹಚ್ಚಿರುವಾಗಲೇ
ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ..
ಅವರ ಆತ್ಮಕ್ಕೆ ಶಾಂತಿ ಸಿಗಲಿ… ಓಂ ಶಾಂತಿ.. pic.twitter.com/X6jgGnFOtB— ಸುನಿ/SuNi (@SimpleSuni) September 24, 2020