CrimeNEWSದೇಶ-ವಿದೇಶ

ಸ್ಕೂಲ್ ಪಕ್ಕದ ಉದ್ಯಾನದಲ್ಲೇ ಟೆಂಟ್ ಹಾಕಿ ಸೆಕ್ಸ್ ದಂಧೆ

ಸಿರಿಂಜ್, ಡ್ರಗ್ಸ್, ಕಾಂಡೋಮ್ ಪತ್ತೆ l ಡ್ರಗ್ಸ್ ನಶೆಯಲ್ಲಿ ದಾಂಡೆನಾಂಗ್ ಸ್ಟ್ರೀಟ್ ಜನರು

ವಿಜಯಪಥ ಸಮಗ್ರ ಸುದ್ದಿ

ಮೆಲ್ಬೋರ್ನ್: ಶಾಲೆಯ ಅನತಿ ದೂರದಲ್ಲಿರುವ ಉದ್ಯನದಲ್ಲಿ ಟೆಂಟ್ ಹಾಕಿ ಸೆಕ್ಸ್ ದಂಧೆ ನಡೆಯುತ್ತಿರುವ ಘಟನೆ ಮೆಲ್ಬೋರ್ನ್ ನ ಪಶ್ಚಿಮ ದಾಂಡೆನಾಂಗ್ ನಗರದ ಹೆಮ್ಮಿಂಗ್ ಸ್ಟ್ರೀಟ್‌ನಲ್ಲಿ ನಡೆದಿದೆ.

ಇತ್ತೀಚೆಗೆ ಈ ಸ್ಥಳದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ದಾಂಡೆನಾಂಗ್ ಸ್ಟ್ರೀಟ್ ಜನರು ಡ್ರಗ್ಸ್ ನಶೆಯಲ್ಲಿ ತೇಲಾಡುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.  ಶಾಲೆಯ ಸಮೀಪದ ಪಾರ್ಕ್, ಮಕ್ಕಳ ಪ್ಲೇ ಗ್ರೌಂಡ್ ಬಳಿ ನಡೆಯುತ್ತಿರುವ ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಬೇಕಿದೆ ಎಂದು  ಸ್ಥಳೀಯ ವ್ಯಾಪಾರಿಯೊಬ್ಬರು ಆಗ್ರಹಿಸಿದ್ದಾರೆ.

ಕೆಲ ಅಪರಿಚಿತರು ಬಂದು ತಾತ್ಕಾಲಿಕ ಟೆಂಟ್ ಹಾಕಿ ಲೈಂಗಿಕ ಕ್ರಿಯೆ, ಮಾದಕ ವಸ್ತುಗಳ ಸೇವನೆಯಲ್ಲಿ ತೊಡಗುತ್ತಾರೆ. ಇನ್ನು ಪಾರ್ಕ್‌ನಲ್ಲಿ ಸ್ಲೀಪಿಂಗ್ ಬ್ಯಾಗ್ಸ್, ಕಾಂಡೋಮ್, ಸಿರಿಂಜ್, ಡ್ರಗ್ಸ್ ಪ್ಯಾಕೇಟ್ ಗಳು ಪತ್ತೆಯಾಗಿವೆ. ನಾಲ್ಕು ತಿಂಗಳಿನಿಂದ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಸ್ಥಳೀಯ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೆಸರು ಹೇಳಲು ಇಚ್ಛಿಸದ ಮಹಿಳೆ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪೊಲೀಸರು ಮತ್ತು ಸಬಂಧ ಪಟ್ಟ ಅಧಿಕಾರಿಗಳು ಕ್ರಮ ಜರುಗಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ವಿಷಯ ಪೊಲೀಸರಿಗೆ ತಿಳಿದಿದಿಯೋ ಅಥವಾ ಗೊತ್ತಿದ್ದು ಗೊತ್ತಿಲ್ಲದಂತೆ  ವರ್ತಿಸುತ್ತಿದ್ದಾರೋ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ಚಟುವಟಿಕೆಗಳಿಂದ ನಮ್ಮ ಅಕ್ಕಪಕ್ಕದ ಯುವಕರು ಕೆಟ್ಟದಾರಿ ತುಳಿಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...