CrimeNEWSನಮ್ಮಜಿಲ್ಲೆ

ಅವಹೇಳನಕಾರಿ ಪೋಸ್ಟ್‌ ಮಾಡಿದ್ದು ಯಾರೋ ಆದರೆ ಶಾಸಕರ ಮನೆ ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಯಾರೋ ಒಬ್ಬ ಮಾಡಿದ ಕೃತ್ಯಕ್ಕೆ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ, ಬೆಂಕಿ ಹಚ್ಚಿ ದಾಂಧಲೆ ಮಾಡಿದ ಘಟನೆ ಇಂದು ರಾತ್ರಿ ನಡೆದಿದೆ.

ಮೊಹಮದ್‌ ಪೈಗಂಬರ್‌ ಬಗ್ಗೆ ಶಾಸಕರ ಸೋದರಳಿಯ ಅವಹೇಳನಕಾರಿ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಂದು ಆರೋಪಿಸಿ ಈ ರೀತಿ ದಾಂಧಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗಲಾಟೆ ವಿಷಯ ತಿಳಿದು ಸ್ಥಳಕ್ಕೆ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆಯುತ್ತಿದ್ದಾರೆ.

ಇನ್ನೊಂದೆಡೆ ನಮಗೆ ನ್ಯಾಯ ಕೊಡಿಸಬೇಕು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಕುಟುಂಬದವರು ಡಿ.ಜಿ. ಹಳ್ಳಿ ಪೊಲೀಸ್‌ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ.

ಈಗಾಗಲೇ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ನವೀನ್‌ ಎಂಬಾತನನ್ನು ಬಂಧಿಸಿದ್ದು ವಿಚಾರಣೆ ಮಾಡುತ್ತಿದ್ದಾರೆ. ಈ ನಡುವೆ ದಾಂಧಲೆ ನಡೆಸಿರುವ ಕಿಡಿಗೇಡಿಗಳು ರಸ್ತೆಯಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿಹಚ್ಚಿ ಆಸ್ತಿ ಪಾಸ್ತಿಗೆ ನಷ್ಟವನ್ನುಂಟು ಮಾಡಿದ್ದಾರೆ. ಪೊಲೀಸರು ಉದ್ರಿಕ್ತಗುಂಪಿನ ನಡುವೆ ಅಶ್ರುವಾಯು ಪ್ರಯೋಗ  ಮಾಡಿದ್ದಾರೆ. ಇನ್ನು ಪೊಲೀಸ್‌ ಠಾಣೆಗೆ ನುಗ್ಗಿ ಡಿಸಿಪಿ ವಾಹನವನ್ನೂ ಧ್ವಂಸ ಮಾಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ