ಬೆಂಗಳೂರು: ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೊಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದ್ದಾರೆ.
ಅಲ್ಲದೇ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳವುದಕ್ಕೆ ಸಚಿವ ಆರ್. ಅಶೋಕ್ ಅವರಿಗೂ ಸೂಚನೆ ನೀಡಿದ್ದಾರೆ.
Matta aki beleyodakke bida bedi