CrimeNEWSನಮ್ಮರಾಜ್ಯರಾಜಕೀಯ

ಕೆಜಿ ಹಳ್ಳಿ  ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು: ಎಎಪಿ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿನ್ನೆ ರಾತ್ರಿ ಪುಲಕೇಶಿ ವಿಧಾನಸಭಾ ಕ್ಷೇತ್ರದ ಕೆಜಿ ಹಳ್ಳಿ ಪೊಲೀಸ್ ಠಾಣೆಯ ಬಳಿ ಧರ್ಮ ನಿಂದನೆ ಮಾಡಿದ ವ್ಯಕ್ತಿಯನ್ನು ಬಂಧಿಸಲು  ಒತ್ತಾಯಿಸಿ ನಡೆದಂತಹ ಘಟನೆ ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಆಮ್ ಆದ್ಮಿ ಪಕ್ಷ  ಖಂಡಿಸಿದೆ.

ಧಾರ್ಮಿಕ ಸಾಮರಸ್ಯ, ಶಾಂತಿ, ಸಹಬಾಳ್ವೆಗೆ ಭಾರತದಲ್ಲಿಯೇ ಮಾದರಿಯಾಗುವಂತಹ ನಗರಗಳಲ್ಲಿ ಬೆಂಗಳೂರು ಅಗ್ರಗಣ್ಯವಾಗಿದೆ. ಈ ಪ್ರತಿಷ್ಠೆಗೆ ಭಂಗ ತರುವಂತಹ ಈ ರೀತಿಯ ಘಟನೆಗಳು ಯಾವುದೇ ಕಾರಣಕ್ಕೂ ಜರುಗ ಬಾರದು. ರಾಜ್ಯ ಗೃಹ ಇಲಾಖೆಯ  ಆಂತರಿಕ  ಬೇಹುಗಾರಿಕ ವಿಭಾಗವು ನಿಷ್ಕ್ರಿಯಗೊಂಡಿದೆ ಎಂಬುದು ಈ ಮೂಲಕ ಸಾಬೀತಾಗುತ್ತದೆ.

ಕೊರೊನಾ ಮಹಾ ಭೀತಿಯ ಸಂದರ್ಭದಲ್ಲಿ ನರಳುತ್ತಿರುವ ನಾಗರಿಕ ಸಮಾಜ  ಈ ರೀತಿಯ ಕ್ಷೋಭೆಗಳಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುವ ಸಂದರ್ಭವನ್ನು ರಾಜ್ಯ ಗೃಹ ಇಲಾಖೆಯು ಮುತುವರ್ಜಿ ವಹಿಸಿಕೊಂಡು ತಪ್ಪಿಸಬೇಕಿದೆ ಎಂದು ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಪ್ರಚೋದನೆ ನೀಡುವಂತಹ  ಹಾಗೂ ಶಾಂತಿ ಕದಡುವಂತಹ ಶಕ್ತಿಗಳು ದಮನವಾಗಬೇಕಿದೆ. ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಸರ್ಕಾರವು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ನಾಗರಿಕ ಸಮಾಜ ಶಾಂತಿ – ನೆಮ್ಮದಿಯಿಂದ  ಸುರಕ್ಷಿತವಾಗಿ ಬದುಕುವಂತಹ ವಾತಾವರಣ ಸೃಷ್ಟಿಯಾಗಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯ ನಾಯಕರು ಒಕ್ಕೊರಿನಿಂದ ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ