ಮಂಡ್ಯ: ಕೊರೊನಾಗೆ ಹೆದರಿ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೊರೊನಾ ಆಸ್ಪತ್ರೆಯಲ್ಲಿ ಇಂದು ತಡರಾತ್ರಿ ನಡೆದಿದೆ.
ಕೊರೊನಾ ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಮಾಹಿತಿ ನೀಡಿದ್ದಾರೆ.
ಮಳವಳ್ಳಿ ತಾಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ ತೀವ್ರ ನೊಂದಿದ್ದ ಅವರು ಶೌಚಾಲಯಕ್ಕೆ ತೆರಳಿ, ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ. ಇತರ ರೋಗಿಗಳು ಶೌಚಾಲಯಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿಸಿದರು.
ಇನ್ನು ಸರ್ಕಾರದ ಕೋವಿಡ್ ಕಾರ್ಯಸೂಚಿಯಂತೆ ಗುರುವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಹೇಳಿದರು.