CrimeNEWSನಮ್ಮರಾಜ್ಯ

ಸಿಂಧನೂರು: ಪ್ರೇಮ ವಿವಾಹ ಗಲಾಟೆ ನಾಲ್ವರ ಹತ್ಯೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಜಿಲ್ಲೆ ಸಿಂಧನೂರಿನಲ್ಲಿ ಕಳೆದ ವರ್ಷ ಪ್ರೀತಿಸಿ ವಿವಾಹ ಮಾಡಿಕೊಂಡಿದ್ದ ಯುವಕನ ಮೇಲಿನ ಸೇಡಿಗಾಗಿ ಆತನ ತಾಯಿ ಸಹೋದರಿ ಹಾಗೂ ಇಬ್ಬರು ಸಹೋದರರನ್ನು ಮನೆಗೆ ನುಗ್ಗಿ ಶನಿವಾರ ಸಂಜೆ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಈ ಸಂಬಂಧ ಹೆಣ್ಣಿನ ಕಡೆಯವರು ಸಿಂಧನೂರು ನಗರದ ಸುಕಾಲಪೇಟೆಯಲ್ಲಿದ್ದ ಯುವಕನ ಮನೆಗೆ ನುಗ್ಗಿ ಸುಮಿತ್ರಾ (58) ಶ್ರೀದೇವಿ (36) ಹನುಮೇಶ (35) ನಾಗರಾಜ (38) ಎಂಬುವರನ್ನು ಕೊಂದಿದ್ದಾರೆ.  ಘಟನೆಯಲ್ಲಿ ರೇವತಿ ತಾಯಮ್ಮ ಹಾಗೂ ಈರಪ್ಪ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂದರ್ಭದಲ್ಲಿ ಪ್ರೇಮಿಗಳಿಬ್ಬರೂ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಕಳೆದ ವರ್ಷ ಪ್ರೀತಿಸಿ ಒಂದೇ ಜಾತಿಗೆ ಸೇರಿದ (ಕುರುಬ) ಈ ಪ್ರೇಮಿಗಳು ವಿವಾಹವಾಗಿ ಬೇರೆ ಊರಿನಲ್ಲಿದ್ದರು.  ಈ ನಡುವೆ ಎರಡು ಮನೆಯವರ ಕೋಪತಾಪ ಕಡಿಮೆ ಆಗಿದೆ ಎಂದು ಇತ್ತೀಚೆಗೆ ಸಿಂಧನೂರಿಗೆ ವಾಪಸಾಗಿದ್ದರು. ಈ ಸಂಬಂಧ ಎರಡು ಕುಟುಂಬಗಳ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಮತ್ತೆ ಶನಿವಾರ ಜಗಳ ನಡೆದಿದ್ದು, ಈ ವೇಳೆ ಯುವತಿಯ ತಂದೆ ಕೋಣದ ಫಕೀರಪ್ಪ ಹಾಗೂ ಆತನ ಸಹೋದರರು ಬಂದು ಹತ್ಯೆ ಮಾಡಿದ್ದಾರೆ.

ಈ ಸಂಬಂಧ ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆ ಮಾಡಿ ಪರಾರಿಯಾಗಿರುವವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್