ಬೆಂಗಳೂರು: ಡಿ.ಜಿ ಹಳ್ಳಿ ಪ್ರದೇಶದಲ್ಲಿ ಮಾಧ್ಯಮ ವರದಿಗಾರರು, ಪೊಲೀಸರ ಮೇಲೆ ಹಲ್ಲೆ ಮಾಡಿ ಕಾನೂನು ಸುವ್ಯವಸ್ಥೆಗೆ ಭಂಗ ತಂದಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಒತ್ತಾಯಿಸಿದ್ದಾರೆ.
ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ, ಪೊಲೀಸ್ ಠಾಣೆ, ಸಾರ್ವಜನಿಕ ಆಸ್ತಿಗಳ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಇಂಥ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು ಎಂದು ಆಗ್ರಹಿಸಿದ್ದಾರೆ.