NEWSನಮ್ಮರಾಜ್ಯರಾಜಕೀಯ

ಬಿಎಸ್‍ವೈಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಟಿ ರವಿ: ಸಚಿವ ಸ್ಥಾನಕ್ಕೆ ರಾಜೀನಾಮೆ ಅನುಮಾನ!

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ನಮ್ಮಲ್ಲಿ ಒಬ್ಬರಿಗೆ ಒಂದು ಸ್ಥಾನ ಎಂಬ ಅಲಿಖಿತ ನಿಯಮವಿದೆ. ಇದೇ ರೀತಿ 75 ವರ್ಷ ದಾಟಿದವರು ಅಧಿಕಾರ, ರಾಜಕೀಯದಿಂದ ನಿವೃತ್ತಿ ಹೊಂದಬೇಕೆಂಬ ನಿಯಮವೂ ಇದೆ. ಆದರೆ ಕೆಲವೊಮ್ಮೆ ವರಿಷ್ಠರೇ ಅಲಿಖಿತ ನಿಯಮಗಳನ್ನು ಬದಲಾವಣೆ ಮಾಡಿದ್ದಾರೆ. ಇದನ್ನು ಗಮನಿಸಿ ಮುಂದಿನ ನಡೆ ಅನುಸರಿಸಬೇಕು ಎಂದು ಪರೋಕ್ಷವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿ.ಟಿ.ರವಿ ಟಾಂಗ್ ನೀಡಿದರು.

ಸಚಿವ ಸಿಟಿ ರವಿ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋಷನ್ ಲಭಿಸಿದ್ದು, ಈ ನಡುವೆಯೇ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿಯು ಹರಡಿದೆ. ಆದರೆ ಸಿಟಿ ರವಿ ಅವರು ನೀಡಿರುವ ಈ ಹೇಳಿಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವರೆ ಎಂಬ ಅನುಮಾನ ಮೂಡಿಸಿದೆ.

ಅಲಿಖಿತ ನಿಯಮಗಳನ್ನು ಬದಲಾಯಿಸಿರುವುದು ಪಕ್ಷದ ವರಿಷ್ಠ ಮಂಡಳಿಯ ನಿರ್ಧಾರ. ಆದರೆ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಹಾಗೂ ವ್ಯಕ್ತಿಗತ ಆಯ್ಕೆಯಂತೆ ನನಗೆ ಸಂಘಟನೆಯೇ ಮುಖ್ಯ. ನಾನು ಪಕ್ಷಕ್ಕೆ ಪ್ರಾಮುಖ್ಯತೆ ನೀಡುತ್ತೇನೆ. ರಾಷ್ಟ್ರೀಯ ರಾಜಕಾರಣಕ್ಕೆ ತೆರಳಿದರೂ ನಮ್ಮ ಬೇರುಗಳು ಇಲ್ಲೇ ಇವೆ. ಪಕ್ಷ ವರಿಷ್ಠರು ಯಾವಾಗ ರಾಜೀನಾಮೆಗೆ ಸೂಚಿಸುತ್ತಾರೋ ಅಂದೇ ರಾಜೀನಾಮೆ ನೀಡುತ್ತೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಮುಂದುವರಿಸುತ್ತೇನೆ ಎಂದರು.

ಕಾಂಗ್ರೆಸ್ ನದ್ದು ದನ ಸತ್ತರೆ ರಣಹದ್ದುಗಳು ಕಾಯುವ ರೀತಿಯ ಮನಸ್ಥಿತಿ. ರಾಹುಲ್ ಗಾಂಧಿ ಸಾಂತ್ವನ ಹೇಳೋದಕ್ಕೆ ಹೊರಟಿರಲಿಲ್ಲ. ಬದಲಾಗಿ ಪ್ರದರ್ಶನ ಮಾಡೋದಕ್ಕೆ ಹೊರಟಿದ್ದರು. ಪ್ರದರ್ಶನದ ಮೂಲಕ ಸಾಂತ್ವನ ಹೇಳೋದಲ್ಲ ಎಂದು ಟಾಂಗ್ ನೀಡಿದರು. ಆದರೆ ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರದ ಘಟನೆಯನ್ನು ಖಂಡಿಸಿದ ರವಿ, ಅತ್ಯಾಚಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಆದರೆ ಇದನ್ನು ರಾಜಕೀಯ ದುರ್ಬಳಕೆ ಮಾಡಿಕೊಳ್ಳುವ ಮನೋಭಾವನೆ ಸರಿಯಲ್ಲ ಎಂದು ಹೇಳಿದರು.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ