NEWSದೇಶ-ವಿದೇಶರಾಜಕೀಯ

ಸಿಡಬ್ಲ್ಯುಸಿ ಸಭೆಯಲ್ಲಿ ನಿರ್ಧಾರ: ಆರು ತಿಂಗಳಲ್ಲಿ ಕಾಂಗ್ರೆಸ್‌ಗೆ ಹೊಸ ಸಾರಥಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಅಗತ್ಯವಿದೆ ಎಂದು ಗುಲಾಂ ನಬಿ ಅಜಾದ್, ಕಪಿಲ್ ಸಿಬಲ್ ಸೇರಿ 23 ಹಿರಿಯ ಕಾಂಗ್ರೆಸ್ಸಿಗರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ ವಿಚಾರ ಇಂದು ನಡೆದ ಕಾಂಗ್ರೆಸ್‌ ಕಾರ್ಯಕಾರ್ಯ ಸಮಿತಿ  ಸಭೆಯಲ್ಲಿ(ಸಿಡಬ್ಲ್ಯುಸಿ) ಬಹಳಷ್ಟು ಚರ್ಚೆಯಾಗಿದೆ.

ಸುಮಾರು ಏಳು ಗಂಟೆಗಳು ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಅಂತಿಮವಾಗಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನೇ ಮುಂದುವರಿಸಲು ನಿರ್ಧರಿಸಲಾಗಿದ್ದು, ಆರು ತಿಂಗಳಲ್ಲಿ ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಹೀಗಾಗಿ ಮುಂದಿನ ಸಿಡಬ್ಲ್ಯುಸಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲಿಯವರೆಗೂ ಸೋನಿಯಾ ಅವರೇ ಹಂಗಾಮಿಯಾಗಿ ಮುಂದುವರಿಯಲಿದ್ದಾರೆ.

ಕಾಂಗ್ರೆಸ್ ದೊಡ್ಡ ಕುಟುಂಬವಿದ್ದಂತೆ. ತನಗೆ ಯಾರ ವಿರುದ್ಧವೂ ದ್ವೇಷ ಇಲ್ಲ. ಆದರೆ, ಪಕ್ಷದ ವೇದಿಕೆಯಲ್ಲಿ ಮಾತ್ರ ಅಭಿಪ್ರಾಯ ವ್ಯಕ್ತಪಡಿಸಿ ಎಂದು ಹಿರಿಯ ನಾಯಕರಿಗೆ ಸಭೆಯಲ್ಲಿ ಸೋನಿಯಾ ಗಾಂಧಿ ಸಲಹೆ ನೀಡಿದ್ದಾರೆ.

ತಾವು ಹಂಗಾಮಿ ಅಧ್ಯಕ್ಷೆ ಹುದ್ದೆ ತೊರೆಯಲಿದ್ದು, ಹೊಸ ಅಧ್ಯಕ್ಷರ ನೇಮಕ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಇಂದು ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ ಕೇಳಿಕೊಂಡರು.

ಆದರೆ ಆರು ತಿಂಗಳ ವರೆಗೆ ನೀವೆ ಮುಂದುವರಿಯಬೇಕು ಎಂದು  ಸಭೆಯಲ್ಲಿದ್ದ  ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಮನವಿ ಮಾಡಿದರು. ಎ.ಕೆ. ಆಂಟನಿ ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಗುಲಾಂ ನಬಿ ಅಜಾದ್, ಚಿದಂಬರಂ ಸೇರಿ ಹಲವರು ಭಾಗವಹಿಸಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?