NEWSನಮ್ಮರಾಜ್ಯ

ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಡಿ. 5ರಂದು ಕರ್ನಾಟಕ ಬಂದ್‌ಗೆ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಮಾಡಿರುವ ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಡಿಸೆಂಬರ್‌ 5ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲು ತೀರ್ಮಾನಿಸಲಾಗಿದೆ.

ಕನ್ನಡ ಚಳವಳಿ ಪಕ್ಷದ ವಾಟಾಳ್‌ ನಾಗರಾಜ್‌ ಅವರ ನೇತೃತ್ವ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಈ ಸಂಬಂಧ ನಡೆದ ವಿವಿಧ ಹೋರಾಟಗಾರರ ಸಂಘಟನೆಗಳ ಸಭೆಯಲ್ಲಿ ಡಿ.5ರಂದು ಬಂದ್‌ ಮಾಡುವ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಲದೆ ನವೆಂಬರ್‌ 23 ರಂದು ಬಳ್ಳಾರಿ ಜಿಲ್ಲೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮರಾಠ ಅಭಿವೃದ್ಧಿ ನಿಗಮ ರಚನೆ ಸಂಬಂಧ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಪ್ರತಿಕ್ರಿಯಿಸಿದ್ದಾರೆ. ಜತೆಗೆ ಕ್ಯಾಬ್‌ ಅಸೋಸಿಯೇಷನ್‌ ಸೇರಿ ಆಟೋ ಚಾಲಕರ ಮಾಲೀಕರ ಸಂಘಟನೆಗಳು ಬೆಂಬಲ ನೀಡುವುದಾಗಿ ತಿಳಿಸಿವೆ.

Leave a Reply

error: Content is protected !!
LATEST
ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ