ಬೆಂಗಳೂರು: ಸರ್ಕಾರ ಮತ್ತು ಸಾರಿಗೆ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಮಂಜಸವಾದ ತೀರ್ಮಾನಕ್ಕೆ ಬಾರದ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದುವರಿಸುವ ತೀರ್ಮಾನ ಮಾಡಿದ್ದೇವೆ ಎಂದು ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಇಂದು ಸಂಜೆ ಸರ್ಕಾರ ಮತ್ತು ಸಚಿವರು ನಮ್ಮ ಮತ್ತು ಮಾಧ್ಯಮಗಳನ್ನು ದಾರಿ ತಪ್ಪಿಸುವ ಮೂಲಕ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಆದರೆ ನಮ್ಮ ನೌಕರರು ನಾವು ಮಾಡುತ್ತಿರುವ ಹೋರಾಟಕ್ಕೆ ಫಲಸಿಕ್ಕಿಲ್ಲ, ಆದ್ದರಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ಈ ವೇಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ನಿರ್ಧರಿಸುವವರೆಗೂ ಯಾವುದೇ ನೌಕರರು ಬಸ್‌ಗಳನ್ನು ತೆಗೆಯಬಾರದು ಎಂದು ಚಂದ್ರು ನೌಕರರಲ್ಲಿ ಮನವಿ ಮಾಡಿದ್ದಾರೆ.