NEWSನಮ್ಮರಾಜ್ಯ

ಕ್ಷೌರಿಕ, ದಂತವೈದ್ಯ ವೃತ್ತಿ ಪುನರಾರಂಭಕ್ಕೆ ಅನುವುಮಾಡಿ

ಮುಖ್ಯಮಂತ್ರಿ ಯಡಿಯೂರಪ್ಪಗೆ ಸಚಿವ ಸುರೇಶ್ ಕುಮಾರ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕ್ಷೌರಿಕ ಸಮುದಾಯ ಹಾಗೂ ದಂತ ವೈದ್ಯ ಸಮುದಾಯದವರು ಸುಗಮ ಜೀವನ ನಡೆಸಲು ಅನುವಾಗುವಂತೆ ಅವರು ವೃತ್ತಿ ಆರಂಭಿಸಲು  ಅವಕಾಶ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ಈ ವೃತ್ತಿಗಳಲ್ಲಿ ಸಾಮಾಜಿಕ  ಅಂತರ ಕಾಯ್ದುಕೊಳ್ಳಲು ಅಗತ್ಯ ನಿರ್ದೇಶನ  ನೀಡುವ ಮೂಲಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಕಾರಣದಿಂದಾಗಿ ಸರ್ಕಾರವು ಲಾಕ್‍ಡೌನ್ ಘೋಷಿಸಿರುವ ಹಿನ್ನಲೆಯಲ್ಲಿ ಹಲವಾರು ವೃತ್ತಿ ನಿರತರು ತೀವ್ರ ಸಂಕ್ಷಕ್ಕೊಳಗಾಗಿರುವುದು ಸರ್ವವೇದ್ಯವಾಗಿದೆ.

ಸರ್ಕಾರ ಕಾಲಕಾಲಕ್ಕೆ ಜಾರಿಗೊಳಿಸಿರುವ ನಿರ್ದೇಶನ, ಮಾರ್ಗಸೂಚನೆಗಳನ್ವಯ  Karnataka Shops and  Establishments Act  ಸ್ಥಾಪಿತವಾಗಿರುವ ಹಲವಾರು ಆರ್ಥಿಕ ಚಟುವಟಿಕೆಗಳು ಹಂತಹಂತವಾಗಿ ಪುನರಾರಂಭವಾಗುತ್ತಿವೆ.

ಸಮಾಜಕ್ಕೆ ತೀರಾ ಅನಿವಾರ್ಯವಾದ ಎರಡು ಪ್ರಮುಖ ವೃತ್ತಿಗಳಾದ ಕ್ಷಾರಿಕರು ಮತ್ತು ದಂತ ಚಿಕಿತ್ಸಕ ವೃತ್ತಿಗಳಿಗೆ ಸಂಬಂಧಿಸಿದಂತೆ ಚಟುವಟಿಕೆ ಆರಂಭಿಸಲು ಕ್ರಮ ರೂಪಿಸು0ವ ಅಗತ್ಯವಿದೆ. ಈ ಎರಡು ವೃತ್ತಿಗಳಲ್ಲಿ ಕಾರ್ಯನಿರತವಾಗಿರುವವರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಸಾಧ್ಯತೆಗಳು ತೀರ ಕಡಿಮೆ ಇರುವ ಹಿನ್ನೆಲೆಯಲ್ಲಿ ಪರಸ್ಪರ ಸೋಂಕು ಹರಡುವ ಸಾಧ್ಯತೆಗಳೂ ಇಲ್ಲದಿಲ್ಲ.

ಆದಾಗ್ಯೂ ಸೋಂಕು ಹರಡದಂತೆ ನೋಡಿಕೊಳ್ಳುವ ಮೂಲಕ ಈ ವೃತ್ತಿಗಳ ಪುನರಾರಂಭಕ್ಕೆ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಯಾವ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕೆಂಬುದರ ಕುರಿತು ಸೂತ್ತೋಲೆ ಹೊರಡಿಸಲು ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆ ನೀಡಬೇಕು. ಅಲ್ಲದೆ ವೃತ್ತಿಗಳನ್ನು ಅವಲಂಭಿಸಿರುವವರು ಸುಗಮ ಜೀವನ ನಡೆಸಲು ಅನುವು ಮಾಡಿಕೊಡಬೇಕೆಂದು  ಮನವಿ ಮಾಡಿದ್ದಾರೆ.

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!