ಮೈಸೂರು: ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ತಡೆಗಟ್ಟುವ ಮುಂಜಾಗೃತ ಕ್ರಮವಾಗಿ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ ಗೌರಿ ಮತ್ತು ಗಣೇಶಚತುರ್ಥಿ ಹಬ್ಬದ ಪ್ರಯುಕ್ತ ಆಗಸ್ಟ್ 19 ರಿಂದ 22 ರವರೆಗೆ ನಾಲ್ಕು ದಿನಗಳ ಕಾಲ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.
ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಆಗಸ್ಟ್ 19 ರಿಂದ ಆಗಸ್ಟ್ 22 ರವರೆಗೆ ನಾಲ್ಕು ದಿನಗಳು ಜೀವರಾಯನಕಟ್ಟೆ ಮೈದಾನದಲ್ಲಿ (ಜೆ.ಕೆ. ಗ್ರೌಂಡ್) ಹೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ