Vijayapatha – ವಿಜಯಪಥ
Saturday, November 2, 2024
NEWSರಾಜಕೀಯಸಂಸ್ಕೃತಿ

 ಶೋಷಿತ ಸಮುದಾಯಕ್ಕೆ ಆಸರೆ  ಅರಸು: ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ  ಇತರ ಸಮುದಾಯಗಳ ಮೇಲೆ ಸವಾರಿ ಮಾಡದ  ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ .ಕುಮಾರಸ್ವಾಮಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಡಿ. ದೇವರಾಜ ಅರಸು ಜನ್ಮದಿನ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ  ರಾಜಕೀಯ ಆಸರೆ ಒದಗಿಸಿದ ಮಹಾನ್ ನಾಯಕ  ಮಾಜಿ ಮುಖ್ಯಮಂತ್ರಿ ದಿವಂಗತ  ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ  ಸ್ಮರಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು  ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ