NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ದೇವೇಗೌಡರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಭಾರತ ಪ್ರಜಾಪ್ರಭುತ್ವದ ತಾಯಿ ನಾವು ಈ ಪಾಠವನ್ನು ಮುಂಬರುವ ಪೀಳಿಗೆಗೆ ಕಲಿಸಬೇಕಾಗಿದೆ. ಏಕೆಂದರೆ ನಮ್ಮ ಪೂರ್ವಜರು ನಮಗೆ ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ರವಾನಿಸಿದ್ದಾರೆ ನಾವು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಸೃಷ್ಟಿಸಬೇಕಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವ ಪಾಶ್ಚಿಮಾತ್ಯ ಸಂಸ್ಥೆಯಲ್ಲ, ಇದು ಮಾನವ ಸಂಸ್ಥೆ. ಭಾರತದ ಇತಿಹಾಸ ಪ್ರಜಾಪ್ರಭುತ್ವ ಸಂಸ್ಥೆಗಳ ಉದಾಹರಣೆಗಳಿಂದ ತುಂಬಿದೆ. ಪ್ರಾಚೀನ ಭಾರತದಲ್ಲಿ 81 ಪ್ರಜಾಪ್ರಭುತ್ವಗಳ ಉಲ್ಲೇಖವನ್ನು ನಾವು ಕಾಣುತ್ತೇವೆ. ಇನ್ನು ಭಾರತ ರಾಷ್ಟ್ರೀಯತೆಯ ಮೇಲಿನ ದಾಳಿಯ ಬಗ್ಗೆ ನಾಗರಿಕರಿಗೆ ಎಚ್ಚರಿಕೆ ನೀಡುವುದು ಇಂದು ಅತ್ಯಗತ್ಯವಾಗಿದೆ ಎಂದರು.

ಇನ್ನು ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡ ಅವರು, ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ ಅವರ ಕೊಡುಗೆಯನ್ನು ಶ್ಲಾಘಿಸಿದರು.

ದೇವೇಗೌಡ ಅವರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ ಎಂದ ಅವರು, ಸದನದಲ್ಲಿ ಕೃಷಿಗೆ ಸಂಬಂಧಿಸಿದ ಚರ್ಚೆಗಳಲ್ಲಿ  ಗೌಡರು ಕೃಷಿಗೆ ನೀಡಿರುವ ಕೊಡುಗೆಯನ್ನು ನಾನು ಪ್ರಶಂಸಿಸುತ್ತೇನೆ. ಅವರ ಮಾತುಗಳು ಚರ್ಚೆಗೆ ಉತ್ತಮ ದೃಷ್ಟಿಕೋನವನ್ನು ನೀಡಿವೆ. ಅವರು ಸ್ವತಃ ಕೃಷಿ ಕ್ಷೇತ್ರದೊಂದಿಗೆ ಬಲವಾದ ಒಡನಾಟವನ್ನು ಹೊಂದಿದ್ದಾರೆ ಎಂದು ಹೇಳಿದರು.

ವಿವಾದಿತ ಕೃಷಿ ಕಾನೂನು ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತಂತೆ ಮಾತನಾಡಿ, ವಿದೇಶಿ ವಿನಾಶಕಾರಿ ಸಿದ್ಧಾಂತದಿಂದ ನಾವು ದೇಶದ ಹೊಸ ತಲೆಮಾರಿನ ಜನರನ್ನು ರಕ್ಷಿಸಬೇಕಿದೆ. ಜತೆಗೆ ಜಾಗೃತಿ ಮೂಡಿಸಬೇಕಿದೆ. ಪ್ರತಿಭಟನೆಯ ಹೆಸರಿನಲ್ಲಿ ಹೊಸ ತಲೆಮಾರಿನ ಜನರನ್ನು ದಾರಿ ತಪ್ಪಿಸಲಾಗುತ್ತಿದೆ ಹಾಗೂ ದೇಶದ ಪ್ರಗತಿಗೆ ಅಡ್ಡಿ ಪಡಿಸಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ದೇಶದಲ್ಲಿ ಹೊಸ ತಳಿಯ ಪ್ರತಿಭಟನಾಕಾರರು ಮತ್ತು ಚಳವಳಿಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಎಚ್ಚರದಿಂದಿರಬೇಕು. ಈಗ ದೇಶದಲ್ಲಿ ವಿನಾಶಕಾರಿ ಐಡಿಯಾಲಜಿ ಹುಟ್ಟಿಕೊಂಡಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಈ ಸಿದ್ಧಾಂತದಿಂದ ರಕ್ಷಿಸಬೇಕಾಗಿದೆ. ಈ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಹೇಳಿದರು.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್