ಧಾರವಾಡ : ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 9 ಜನರಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು ಸಾಂಸ್ಥಿಕ ಕೊರೊಂಟೈನ್‍ಲ್ಲಿ ಪ್ರತ್ಯೇಕವಾಗಿ ಇರಿಸಲಾಗಿತ್ತು. ಮತ್ತು ಅವರು ಬಂದ ಕೂಡಲೇ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವುದರಿಂದ ಹುಬ್ಬಳ್ಳಿಯ ಕಿಮ್ಸ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೋವಿಡ್ ಪಾಸಿಟಿವ್ ಹೊಂದಿರುವ ವ್ಯಕ್ತಿಗಳನ್ನು ಪಿ- 879 (55), ಪಿ-880 (31), ಪಿ-881 (25), ಪಿ-882 (70), ಪಿ-883 (26), ಪಿ-884 (18), ಪಿ-885 (19), ಪಿ-886 (20), ಪಿ-887 (27) ಎಂದು ಗುರುತಿಸಲಾಗಿದ್ದು, ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಪಾಸಿಟಿವ್ ಹೊಂದಿರುವ 21 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಈಗಾಗಲೇ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 14 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail