NEWSನಮ್ಮಜಿಲ್ಲೆಸಂಸ್ಕೃತಿ

ಪುಟ್ಟ ಪೋರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಾಮಕರಣ ಸಂಭ್ರಮ

ವಿಜಯಪಥ ಸಮಗ್ರ ಸುದ್ದಿ

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ವಿಶೇಷ ದಿನವಾಗಿತ್ತು. ಅದೇನಪ್ಪ ಅಂದ್ರೆ ಎರಡು ತಿಂಗಳ ಹಿಂದೆ ಹುಟ್ಟಿದ್ದ ಪುಟಾಣಿಗೆ ನಾಮಕರಣ ಮಾಡಿದ್ದು.

ಹೌದು. ಜುಲೈ1 ರಂದು ಆನೆ ಲಕ್ಷ್ಮಿಗೆ ಹುಟ್ಟಿದ ಕುವರಿಗೆ ಇಂದು ನಾಮಕರಣದ ಸಂಭ್ರಮ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ನಾಮಕರಣ ವಿಧಿ ನೆರವೇರಿಸಿದರು.

ತುಲಾ ಲಗ್ನ ಮುಹೂರ್ತದಲ್ಲಿ ಈ ಕುವರಿಗೆ ಶಿವಾನಿ ಎಂದು ನಾಮಕರಣ ಮಾಡಲಾಯಿತು. ಡಾ.ವೀರೇಂದ್ರ ಹೆಗ್ಗಡೆ ಮೊಮ್ಮಗಳು ಶಿವಾನಿ ಹೆಸರು ಉದ್ಘೋಷಿಸುವ ಮೂಲಕನಾಮಕರಣ ಮಾಡಲಾಯಿತು.

ಶ್ರೀಧಾಮ‌ ಮಾಣಿಲದ ಮೋಹನದಾಸ ಸ್ವಾಮೀಜಿ ಆನೆಯ ಮಾವುತ ಕೃಷ್ಣ ಅವರಿಗೂ ಈ ಸಂದರ್ಭದಲ್ಲಿ ಸನ್ಮಾನಿಸಿದರು.

ಹೇಮಾವತಿ ವಿ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸೇರಿ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Leave a Reply

error: Content is protected !!
LATEST
ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ