ಮಂಗಳೂರು: ಕೊರೊನಾ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 50 ಲಕ್ಷ ರೂ. ಮೌಲ್ಯದ ಒಂದು ಸಾವಿರ ಆಹಾರ ಕಿಟ್‍ಗಳನ್ನು ಸೋಮವಾರ ವಿತರಿಸಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅದೇ ರೀತಿಯಲ್ಲಿ ಎಂ.ಸಿ.ಎಫ್. ವತಿಯಿಂದ ಲಾಕ್‍ಡೌನ್‍ಯಿಂದ ತೊಂದರೆ ಒಳಗಾದ ದ.ಕ. ಜಿಲ್ಲಾ ಛಾಯಾಗ್ರಾಹಕರಿಗೆ ಆಹಾರ ಕಿಟ್‍ಯನ್ನು ವಿತರಣೆ ಮಾಡಲಾಯಿತು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಕಿಟ್ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮರಬ್ಬ, ಸತೀಶ್ ಶೆಟ್ಟಿ, ವಸಂತ್, ಮಾಜಿ ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಆಶಾ ಮೇಲ್ವಿಚಾರಕಿ ಕುಮುದಾ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail