NEWSನಮ್ಮಜಿಲ್ಲೆ

ಆರೋಗ್ಯ ಕಾರ್ಯಕರ್ತೆ, ಜಿಲ್ಲಾ ಛಾಯಾಗ್ರಾಹಕರಿಗೆ ಕಿಟ್ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕೊರೊನಾ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಆರೋಗ್ಯ ಕಾರ್ಯಕರ್ತೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ  50 ಲಕ್ಷ ರೂ. ಮೌಲ್ಯದ ಒಂದು ಸಾವಿರ ಆಹಾರ ಕಿಟ್‍ಗಳನ್ನು ಸೋಮವಾರ ವಿತರಿಸಲಾಯಿತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅದೇ ರೀತಿಯಲ್ಲಿ ಎಂ.ಸಿ.ಎಫ್. ವತಿಯಿಂದ ಲಾಕ್‍ಡೌನ್‍ಯಿಂದ ತೊಂದರೆ ಒಳಗಾದ ದ.ಕ. ಜಿಲ್ಲಾ ಛಾಯಾಗ್ರಾಹಕರಿಗೆ ಆಹಾರ ಕಿಟ್‍ಯನ್ನು ವಿತರಣೆ ಮಾಡಲಾಯಿತು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ  ಸಂಸದರ ಕಚೇರಿಯಲ್ಲಿ ಕಿಟ್ ವಿತರಣೆ  ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ್,  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಉಮರಬ್ಬ, ಸತೀಶ್ ಶೆಟ್ಟಿ, ವಸಂತ್, ಮಾಜಿ ಜಿ.ಪಂ. ಉಪಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಆಶಾ ಮೇಲ್ವಿಚಾರಕಿ ಕುಮುದಾ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ