NEWSನಮ್ಮಜಿಲ್ಲೆನಮ್ಮರಾಜ್ಯ

ಅಧಿವೇಶನಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಕೋಲಾಹಲ : ಸದನಬಾವಿಗಿಳಿದು ವಿಪಕ್ಷಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸದನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಆಡಳಿ ಮತ್ತು ವಿಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆದಿದ್ದು, ಸದನದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪಟ್ಟುಹಿಡಿದರು ಈ ವೇಳೆ ಸಚಿವ ಗೋವಿಂದ ಕಾರಜೋಳ ಅವರು ವಿಪಕ್ಷ ಶಾಸಕರ ವಿರುದ್ಧ ಏಕವಚನ ಪ್ರಯೋಗ ಮಾಡಿದರು. ಹೀಗಾಗಿ ಸದಸನಲ್ಲಿ ಕೋಲಹಲವೇ ಸೃಷ್ಟಿಯಾಯಿತು.

ಇದನ್ನು ಖಂಡಿಸಿ ಸದನದ ಬಾವಿಗಿಳಿದು ವಿಪಕ್ಷ ಶಾಸಕರು ಆಡಳಿತ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಸರ್ಕಾರದ ಸಚಿವರ ನಡೆಯನ್ನು ಖಂಡಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನು ನೌಕರರ ಬೇಡಿಕೆ ಈಡೆರಿಸುವಲ್ಲಿ ಸರ್ಕಾರಕ್ಕೆ ಏನು ಸಮಸ್ಯೆಯಾಗಿದೆ ಎಂದು ಕಿಡಿಕಾರಿದ ವಿಪಕ್ಷಗಳಿಗೆ ಸಚಿವ ಶ್ರೀರಾಮುಲು ಅವರು ಈ ಬಗ್ಗೆ ಈಗಾಗಲೇ ಮಾತುಕತೆ ಮಾಡಿದ್ದೇನೆ ಸದನ ಮುಕ್ತಾಯವಾಗುವುದರೊಳಗೆ ತೀರ್ಮಾನವಾಗಲಿದೆ ಎಂದು ಉತ್ತರ ನೀಡಿದರು.

ಈ ವೇಳೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂಬ ಬಗ್ಗೆ ಮಾತನಾಡಲು ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ ಮತ್ತು ಕಾಂಗ್ರೆಸ್‌ ಶಾಸಕರಿಗೆ ಮಾತನಾಡಲು ಅವಕಾಶ ನೀಡದಂತೆ ಬಿಜೆಪಿಯ ಸಚಿವರು ಪಟ್ಟು ಹಿಡಿದ್ದಾರೆ. ಇದರಿಂದ ಸದಸನಲ್ಲಿ ಗದ್ದಲ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ