NEWSಉದ್ಯೋಗನಮ್ಮಜಿಲ್ಲೆ

ಮೈಸೂರು ಮಹಾನಗರ ಪಾಲಿಕೆಯ 110 ಪೌರ ಕಾರ್ಮಿಕರು ವಜಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 110 ಪೌರಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ತಮ್ಮನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ಪಾಲಿಕೆಯು ಜಾರಿಗೆ ತಂದಿದ್ದ ಪೌರಕಾರ್ಮಿಕರಿಗೆ ವೇತನ ʻನೇರ ಪಾವತಿʼ ಪಟ್ಟಿಯಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 110 ಪೌರಕಾರ್ಮಿಕರ ಹೆಸರನ್ನು ತೆಗೆಯಲಾಗಿದೆ. ಹೀಗಾಗಿ, ಅವರಿಗೆ ಕಳೆದ ಎರಡು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ.

ನಂತರ ಕರ್ತವ್ಯದಿಂದ ಏಕಾಏಕಿ ವಜಾಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಈ ನಡೆ ಖಂಡನೀಯʼ ಎಂದು ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ಮತ್ತು ಕಾಯಂ ಪೌರಕಾರ್ಮಿಕರ ಸಂಘದ ಅಧ್ಯಕ್ಷ ರಮೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ಈ ರೀತಿ ಏಕಾಏಕಿ ಕರ್ತವ್ಯದಿಂದ ವಜಾಗೊಳಿಸುವುದು ಸರಿಯಲ್ಲ. ಕುಟುಂಬದ ನಿರ್ವಹಣೆ ಜವಾಬ್ದಾರಿಯೂ ನಮ್ಮ ಮೇಲಿದೆ. ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿರುವ ಸಂದರ್ಭದಲ್ಲೇ ನೂರಾರು ಪೌರಕಾರ್ಮಿಕರನ್ನು ವಜಾಗೊಳಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಈ ಸಂಬಂಧ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಪರಿಶೀಲಿಸಿ ಕ್ರಮವಹಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ