Breaking NewsNEWSನಮ್ಮಜಿಲ್ಲೆರಾಜಕೀಯ

ಬಂಡಾಯ ಬಾವುಟ ಹಾರಿಸಿದ ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು: ಬಿಜೆಪಿಗೆ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಅರಸೀಕೆರೆ ನಗರಸಭೆಯ 7 ಜೆಡಿಎಸ್ ಸದಸ್ಯರು ಹಾಗೂ ಒಬ್ಬ ಪಕ್ಷೇತರ ಸದಸ್ಯ ಬಂಡಾಯ ಬಾವುಟ ಹಾರಿಸಿದ್ದಾರೆ.

ಈ ಮೂಲಕ ತಮಗೆ ಪ್ರತ್ಯೇಕ ಆಸನ ನೀಡುವಂತೆ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು, 31 ಸದಸ್ಯರನ್ನು ಒಳಗೊಂಡಿರುವ ಅರಸೀಕೆರೆ ನಗರಸಭೆಯಲ್ಲಿ 21 ಮಂದಿ ಜೆಡಿಎಸ್ ನಿಂದ ಗೆದ್ದುಬಂದಿದ್ದಾರೆ. ಬಿಜೆಪಿಯಿಂದ 6 ಹಾಗೂ ಪಕ್ಷೇತರ 3 ಮತ್ತು ಕಾಂಗ್ರೆಸ್ ಒಬ್ಬರು ಆಯ್ಕೆಯಾಗಿದ್ದಾರೆ.

ಜೆಡಿಎಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಮುನಿಸಿಕೊಡಿರುವ ಈ ಏಳು ಸದಸ್ಯರು, ತಮಗೆ ಯಾವುದೇ ರೀತಿ ಸ್ಪಂದನೆಯನ್ನು ಈಗಿರೋ ನಾಯಕರು ನೀಡುತ್ತಿಲ್ಲ. ಮೀಸಲಾತಿಯನ್ವಯ ಈಗ ಬಿಜೆಪಿಯವರು ಅರಸೀಕೆರೆ ನಗರಸಭೆ ಅಧ್ಯಕ್ಷರಾಗಿದ್ದಾರೆ. ಅವರು ಉತ್ತಮವಾಗಿ ಕೆಲಸ ಮಾಡಬೇಕಾದರೆ ನಮ್ಮೆಲ್ಲರ ಸಹಕಾರ ಬೇಕಾಗಿರುತ್ತದೆ. ಇದರಿಂದ ನಾವೂ ಉತ್ತಮವಾಗಿ ಜನಸೇವೆ ಮಾಡಬಹುದು ಎಂಬ ಕಾರಣ ನೀಡಿ, ಬಿಜೆಪಿಗೆ ಬೆಂಬಲ ನೀಡುವುದಾಗಿ ತಿಳಿಸಿ, ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಡಿಸಿಗೆ ಮನವಿ ಮಾಡಿದ್ದಾರೆ.

ಅರಸೀಕೆರೆ ನಗರಸಭೆಗೆ ಜೆಡಿಎಸ್‍ನಿಂದ 21 ಜನ ಆಯ್ಕೆಯಾಗಿದ್ದು, ಆ ಸಂಖ್ಯೆಯ ಮೂರನೇ ಒಂದು ಭಾಗವಾಗಿ ನಾವು ಏಳುಜನ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ನೀಡಿದ್ದೇವೆ. ಹೀಗಾಗಿ ನಾವು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದಂತೆ ಆಗುವುದಿಲ್ಲ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಆಕ್ರೋಶ
ಈ ರಾಜಕೀಯ ಕುಚೇಷ್ಟೆ ಹಿಂದೆ ನೇರವಾಗಿ ಬಿಜೆಪಿ ಇದೆ ಎಂದು ಈ ಬೆಳವಣಿಗೆಯಿಂದ ಕೆರಳಿದ ಶಾಸಕ ಶಿವಲಿಂಗೇಗೌಡ ಅರಸೀಕೆರೆಗೆ ರಾಜಕೀಯ ಆಸರೆ ಪಡೆಯಲು ಬಂದವರೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಸಮ್ಮಿಶ್ರ ಸರ್ಕಾರ ಬೀಳಿಸಿದವರಿಗೆ ಇದು ಸಾಧ್ಯವಾಗದಿರು ಎಂದ ಅವರು ಸದಸ್ಯರ ನಡೆ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅರಸೀಕೆರೆಯಲ್ಲಿ ಜೆಡಿಎಸ್ ಸಂಖ್ಯಾ ಬಲ ಜಾಸ್ತಿ ಇದ್ದರೂ ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಅಭ್ಯರ್ಥಿ ಅಲಂಕರಿಸಿದ್ದಾರೆ. ಆದರೆ ಜೆಡಿಎಸ್ ಭದ್ರ ಕೋಟೆಯಾಗಿರುವ ಅರಸೀಕೆರೆಯಲ್ಲಿ ಬಿಜೆಪಿ ಇಷ್ಟೆಲ್ಲಾ ಕಸರತ್ತು ಮಾಡುತ್ತಿದೆ ಎಂದರೆ ಅದರ ಹಿಂದೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಇದ್ದಾರೆ ಅನ್ನೋ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಈ ಸಂತೋಷ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ, ಅರಸೀಕೆರೆಯಿಂದ ಸ್ಪರ್ಧೆಗೆ ಸಿದ್ಧ ಎಂದು ಈ ಹಿಂದೆ ಕೂಡ ಸ್ಪಷ್ಟವಾಗಿ ಹೇಳಿದ್ದರು. ಅಲ್ಲದೆ ನಿರಂತರವಾಗಿ ಅರಸೀಕೆರೆಯಲ್ಲಿ ಓಡಾಡುತ್ತಿರುವ ಅವರು, ಈಗ ತೆರೆಮರೆಯಲ್ಲೇ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಇದೆಲ್ಲದರ ಮಧ್ಯೆ ಜೆಡಿಎಸ್ ನಾಯಕರು ತಮ್ಮ ಸದಸ್ಯರನ್ನು ಹೇಗೆ ಮನವೊಲಿಸುತ್ತಾರೆ ಎಂಬುದು ಈಗ ಇನ್ನಷ್ಟು ಕುತೂಹಲ ಮೂಡಿಸಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ