NEWSನಮ್ಮಜಿಲ್ಲೆನಮ್ಮರಾಜ್ಯ

ಸ್ವಾಭಿಮಾನಿ ಸಾರಿಗೆ ನೌಕರರ ಪಾದಯಾತ್ರೆಗೆ 9 ದಿನ: ನೆಲಮಂಗಲದಿಂದ ವಿಧಾನಸೌದ ಕಡೆಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಸ್ವಾಭಿಮಾನಿ ಸಾರಿಗೆ ನೌಕರರ ಪಾದಯಾತ್ರೆ 9ನೇ ದಿನವಾದ (ಡಿ.7) ಇಂದು ನೆಲಮಂಗಲದಿಂದ ವಿಧಾನಸೌದ ಕಡೆಗೆ ಸಾಗುತ್ತಿದೆ.

ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್‌ ಕೇಸ್‌ಗಳನ್ನು ವಾಪಸ್‌ ಪಡೆಯುವಂತೆ ಆಗ್ರಹಿಸಿ ಕಳೆದ 8 ದಿನಗಳಿಂದ (ನ.29) ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಿಂದ ವಿಧಾನಸೌಧದ ವರೆಗೆ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಗಳವಾರವಾದ ಇಂದು 9ನೇ ದಿನಕ್ಕೆ ಕಾಲಿಟ್ಟಿದ್ದು ನಿರೀಕ್ಷೆಗೂ ಮೀರಿ ಸಾರಿಗೆಯ ನಾಲ್ಕೂ ನಿಗಮಗಳ ನೂರಾರು ನೌಕರರು ಪಾಲ್ಗೊಂಡಿದ್ದಾರೆ.

ಸೋಮವಾರ ರಾತ್ರಿ ನೆಲಮಂಗಲದ ಬಸವೇಶ್ವರ ಪಠ ಬಸವ ಮಂಟಪದಲ್ಲಿ ವಾಸ್ತವ್ಯ ಮಾಡಿ ಇಂದು ಬೆಳಗ್ಗೆ ತಮ್ಮ ಪಾದಯಾತೆಯನ್ನು ಮುಂದುವರಿಸಿದ್ದಾರೆ.

ಭಾನುವಾರ ರಾತ್ರಿ ದಾಬಸ್‌ಪೇಟೆಯ ಸಿದ್ದಲಿಂಗೇಶ್ವರ ಸಮುದಾಯ ಭವನದಲ್ಲಿ ವಾಸ್ತವ್ಯ ಮಾಡಿದ್ದರು. ಸೋಮವಾರ ಬೆಳಗ್ಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ 65ನೇ ಪರಿನಿರ್ವಾಣ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮತ್ತೆ ಪಾದಯಾತ್ರೆ ಮುಂದುವರಿಸಿದರು.

ಇನ್ನು ಸಾರಿಗೆ ನೌಕರರ ಪಾದಯಾತ್ರೆಯನ್ನು ಅಸಂಘಟಿದ ಕಾರ್ಮಿಕರ ಮುಖಂಡರು, ಸಿಐಟಿಯು ದಾಬಸ್‌ಪೇಟ್‌ ಘಟಕದ ಪದಾಧಿಕಾರಿಗಳು ಬೆಂಬಲಿಸಿದ್ದಾರೆ. ಹೀಗೆ ನೌಕರರ ಪಾದಯಾತ್ರೆಗೆ ಹಲವು ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸುತ್ತಿದ್ದು, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಾವು ಕೂಡ ಕೂ ಜೋಡಿಸುತ್ತೇವೆ ಎಂಬ ಭರವಸೆ ನೀಡುತ್ತಿದ್ದಾರೆ.

ಶನಿವಾರ ರಾತ್ರಿ ತುಮಕೂರಿನ ಸಿದ್ಧಗಂಗಾಮಠದಲ್ಲಿ ವಾಸ್ತವ್ಯ ಮಾಡಿ ಭಾನುವಾರ ಬೆಳಗ್ಗೆ 8ಗಂಟೆಗೆ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮತ್ತೆ ಪಾದಯಾತ್ರೆ ಮುಂದುವರಿಸಿದರು.

ಈ ನಡುವೆ ಮೊನ್ನೆ ನಡೆದ ನೌಕರರ ಸರ್ವ ಸಂಘಟನೆಗಳ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಎಲ್ಲ ಸಂಘಟನೆಗಳ ಪ್ರಮುಖರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಈ ಪಾದಯಾತ್ರೆ ವಿಧಾನಸೌಧ ತಲುಪುವ ವೇಳೆ ಸಾವಿರಾರು ಸಂಖ್ಯೆಯ ನೌಕರರು ಇತರ ಕನ್ನಡಪರ, ದಲಿತಪರ, ನೌಕರರಪರ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕತರು ಭಾಗವಹಿಸುವ ಮೂಲಕ 10 ಸಾವಿರ ಮೀರುವ ಸಾಧ್ಯತೆ ಇದೆ.

ಪಾದಯಾತ್ರೆ ಸಾಗುತ್ತಿರುವ ಮಾರ್ಗ: ಬಳ್ಳಾರಿ ಕೇಂದ್ರ ಬಸ್‌ನಿಲ್ದಾಣದಿಂದ ಆರಂಭವಾದ ಪಾದಯಾತ್ರೆ ಹಾನಗಹಲ್‌- ಚಳ್ಳಕೆರೆ – ಹಿರಿಯೂರು ಬೈಪಾಸ್‌ – ತುಮಕೂರು – ಯಶವಂತಪುರ – ಮೇಖ್ರಿ ವೃತ್ತ – ಪ್ಯಾಲೇಸ್‌ಗುಟ್ಟಹಳ್ಳಿ ಮಾರ್ಗವಾಗಿ ಸಾಗುತ್ತಿದೆ.

ಇನ್ನು ಇದೇ ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನೌಕರರ ಪರವಾದ “ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಗಳ ಜಂಟಿ ಸಮಿತಿ” ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳುವುದಾಗಿ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ