ವಿಜಯಪಥ ಸಮಗ್ರ ಸುದ್ದಿ
ಮೈಸೂರು: ದಕ್ಷ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಪರ ನಾನಿದ್ದೇನೆ. ದಕ್ಷ ಡಿಸಿ ವರ್ಗಾವಣೆಗೆ ವ್ಯವಸ್ಥಿತ ಪಿತೂರಿ ಮಾಡಲಾಗಿದ್ದು, ಇದನ್ನು ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಿ ಮಾತನಾಡಿದ ಅವರು, ಸಿಎಂ ಸಿಂಧೂರಿ ಅವರನ್ನು ಉಳಿಸಬೇಕಿದೆ. ಇಲ್ಲಿರುವ ಅನೇಕ ಅಕ್ರಮ ಆಚೆ ಬರುವ ಭಯದಿಂದ ಜಿಲ್ಲಾಧಿಕಾರಿ ವರ್ಗಾವಣೆಗೆ ಪಿತೂರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭೂ ಹಗರಣದ ವಿರುದ್ಧ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಷೇಧಿಸುವಂತೆ ಆಗ್ರಹಿಸಿ ನಾಳೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ಮನೆ ಎದುರು ಪ್ರತಿಭಟಿಸಲಾಗುವುದು. ಜತೆಗೆ ಪರೀಕ್ಷೆ ರದ್ದು ಪಡಿಸಿದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಯೂರು ವಿಠ್ಠಲಮೂರ್ತಿ, ಮುಗೂರು ನಂಜುಂಡಸ್ವಾಮಿ ಇತರರು ಇದ್ದರು.