ಬೆಂಗಳೂರು: ಮಹಿಳೆಯರ ಪಾತ್ರ, ಮಹಿಳೆಯರ ಹಕ್ಕು, ಮಹಿಳೆಯರ ಸುರಕ್ಷೆಯ ಬಗ್ಗೆ ಅರಿವು ಮೂಡಿಸುವುದರಲ್ಲಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ತಿಳಿಸಿದರು.
ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬೃಹತ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ತುಳಿತಕ್ಕೊಳಗಾದ ಮಹಿಳೆಯರು ಸೇರಿದಂತೆ ಇತರ ಎಲ್ಲ ವರ್ಗದವರ ಏಳಿಗೆಗೆ ನಮ್ಮ ಪಕ್ಷದ ಮಹಿಳಾ ತಂಡ ಸನ್ನದ್ಧ ವಾಗಿದೆ ಎಂದರು.
ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಹೆಚ್ಚಾಗಿ ಮಹಿಳೆಯರ ಅಭಿವೃದ್ಧಿಗೆ ಹೆಚ್ಚು ಒತ್ತುಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಮಾವೇಶದಲ್ಲಿ ಅತೀ ಹೆಚ್ಚು ಮಹಿಳೆಯರು ಪಕ್ಷ ಸೇರ್ಪಡೆಯಾದರು. ಇದು ನಿಜಕ್ಕೂ ಪಕ್ಷಕ್ಕೆ ಆನೆ ಬಲ ತಂದುಕೊಟ್ಟಂತಾಗಿದೆ ಎಂದು ಹೇಳಿದರು.
ಸಮಾವೇಶದಲ್ಲಿ 400ಕ್ಕೂ ಹೆಚ್ಚು ಮಹಿಳೆಯರು ಮತ್ತು ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲ ಸ್ವಾಮಿ, ಪ್ರಧಾನ ಕಾರ್ಯದರ್ಶಿಯಾದ ಸುಹಾಸಿನಿ ಫಣಿರಾಜ್, ಬೆಂಗಳೂರು ಜಿಲ್ಲಾಧ್ಯಕ್ಷ ಮೋಹನ್ ದಾಸರಿ, ಉಪಾಧ್ಯಕ್ಷರಾದ ಸುರೇಶ್ ರಾಥೋಡ್ ಮತ್ತು ಬಿ.ಟಿ. ನಾಗಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಚಂದ್ರ.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶರತ್ ಖಾದ್ರಿ , ಬೊಮ್ಮನಹಳ್ಳಿ ಉಸ್ತುವಾರಿ ಸೀತಾರಾಮ್, ಬೇಗುರಿನ ಅಧ್ಯಕ್ಷರಾದ ಪದ್ಮ ಗಿರೀಶ್, ವೀಣಾ ಸೆರೋವ್, ಉಷಾ ಮೋಹನ್, ಪಲ್ಲವಿ ಚಿದಂಬರ, ಯೋಗಿತಾ, ಪಲ್ಲವಿ, ಸಹನಾ, ರಶ್ಮಿ, ಶಿಲ್ಪ ಇನ್ನು ಮುಂತಾದವರು ಭಾಗವಹಿಸಿದ್ದರು.
ಬೆಂಗಳೂರು: ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್ ಸಹಿ ಸಂಗ್ರಹ ಅಭಿಯಾನ ಇಂದಿಗೆ ಮೂರು ದಿನಗಳನ್ನು ಪೂರ್ಣಗೊಳಿಸುತ್ತಿದೆ.
ತೆರೆದ ವಾಹನ ಬಳಸಿಕೊಂಡು ಬೆಂಗಳೂರಿನಾದ್ಯಂತ ಜನಜಾಗೃತಿಗೆ ಆಮ್ ಆದ್ಮಿ ಪಾರ್ಟಿ ಮುಂದಾಗಿದ್ದು, ಮೂರನೇ ದಿನವಾದ ಇಂದು ವಾಹನವು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಚರಿಸುತ್ತಿದೆ.