NEWSನಮ್ಮಜಿಲ್ಲೆರಾಜಕೀಯ

ಕಲ್ಪತರು ನಾಡಿನಲ್ಲಿ ಹೊಸ ರಾಜಕೀಯ ಮನ್ವಂತರಕ್ಕೆ ಮುನ್ನುಡಿ: ಎಎಪಿಯ ಪೃಥ್ವಿ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಆಮ್ ಆದ್ಮಿ ಪಕ್ಷವು ಕರ್ನಾಟಕ ರಾಜ್ಯದಲ್ಲಿ ಅವಿರತವಾಗಿ ಪಕ್ಷ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು, ರಾಜ್ಯಾದ್ಯಂತ ಪಕ್ಷ ಸಂಘಟನೆಯ ಪುನರ್ರಚನೆ ಮಾಡುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವು ಎಂಟು ತಿಂಗಳುಗಳಿಂದ ಸಿದ್ಧತೆ ನಡೆಸುತ್ತಿದ್ದು, ಇದರ ಅಂಗವಾಗಿ ತುಮಕೂರುನಲ್ಲಿಯೂ ಫೆಬ್ರವರಿ 10 ರಂದು ಪಕ್ಷದ ಮಿಸ್ಡ್‌ಕಾಲ್ ನಂ 7669400410 ಅನ್ನು ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿಯವರು ಬಿಡುಗಡೆ ಮಾಡಿದ್ದನ್ನು ಸ್ಮರಿಸಬಹುದಾಗಿದೆ. ಈ ಮಿಸ್ಡ್ ಕಾಲ್ ನಂಬರಿಗೆ ತುಮಕೂರು ಜಿಲ್ಲೆಯಲ್ಲಿ ಅತ್ಯುತ್ತಮ ಸ್ಪಂದನೆ ದೊರಕಿದೆ ಎಂದು ಬುಧವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲೆಗೆ ಪಕ್ಷದ ವೀಕ್ಷಕರನ್ನಾಗಿ ಪಕ್ಷದ ಹಿರಿಯ ಮುಖಂಡರಾದ ಬಿದನಗೆರೆ ಟಿ. ನಾಗಣ್ಣ ಅವರನ್ನು ನೇಮಕ ಮಾಡಲಾಗಿದೆ ಮತ್ತು ಪಕ್ಷದ ತುಮಕೂರು ನಗರ ಘಟಕದ ಅಧ್ಯಕ್ಷರನ್ನಾಗಿ ಸಮಾಜ ಸೇವಕ, ಉದ್ಯಮಿ ಮುನೀರ್ ಅಹಮದ್ ಅವರನ್ನು ನೇಮಕ ಮಾಡಲಾಯಿತು.

ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರವನ್ನು ಪಕ್ಷದ ರಾಜ್ಯ ಉಸ್ತುವಾರಿಗಳಾದ ರೋಮಿ ಭಾಟಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ವಿತರಿಸಿದರು.

ನಾಗಣ್ಣ ಅವರ ಪರಿಚಯ
ನಾಗಣ್ಣ ಅವರು ಹೆಸರಾಂತ ಉದ್ಯಮಿಯಾಗಿದ್ದು, ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ರಾಜಕೀಯ ಅನುಭವ ಹೊಂದಿರುವ ನಾಗಣ್ಣರವರು ಕಳೆದ 2 ವರ್ಷಗಳಿಂದ ಆಮ್ ಆದ್ಮಿ ಪಕ್ಷ ಬೆಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಮುನೀರ್ ಅವರ ಪರಿಚಯ
ಮನೀರ್ ಅಹಮದ್ ಕಳೆದ ಇಪ್ಪತ್ತು ವರ್ಷಗಳಿಂದ ತುಮಕೂರು ನಗರದ ಮನೆಮಾತಾಗಿರುವ ಉದ್ಯಮಿ. ಅನೇಕ ಸಮಾಜ ಸೇವಾ ಸಂಘಟನೆಗಳಲ್ಲಿ ಸಕ್ರಿಯವಾಗಿರುವ ಮುನೀರ್‌ ಅವರಿಗೆ ತುಮಕೂರು ನಗರದಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಲಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ತುಮಕೂರು ಜಿಲ್ಲಾ ಘಟಕದ ಪುನರ್ರಚನೆಯನ್ನೂ ಮಾಡಲಾಗುವುದು ಎಂದು ಪೃಥ್ವಿ ರೆಡ್ಡಿ ತಿಳಿಸಿದರು. ಪಕ್ಷದ ತುಮಕೂರು ವೀಕ್ಷಕರಾದ ಬಿ.ಟಿ.ನಾಗಣ್ಣ, ತುಮಕೂರು ನಗರ ಘಟಕದ ಅಧ್ಯಕ್ಷರಾದ ಮುನೀರ್ ಅಹಮದ್ ಇದ್ದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ