CrimeNEWSನಮ್ಮಜಿಲ್ಲೆ

ರಮೇಶ್‌ ಜಾರಕಿಹೊಳಿ ವಿರುದ್ಧ ಇಂದು 2.30ಕ್ಕೆ ಸಿಟಿ ಪೊಲೀಸ್ ಕಮೀಷನರ್‌ಗೆ ದೂರು: ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 2.30ಕ್ಕೆ ಪೊಲೀಸ್‌ ನಗರ ಆಯುಕ್ತರಿಗೆ ದೂರು ನೀಡುವುದಾಗಿ ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್‌ ಹೇಳಿದ್ದಾರೆ

ಪ್ರಕರಣ ಸಂಬಂಧ ಸಂತ್ರಸ್ತ ಯುವತಿ ಇಂದು ತನ್ನ ಮೂರನೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ತಿಳಿಸಿದ್ದಾರೆ.

ಸಿಡಿಯಲ್ಲಿರುವ ಯುವತಿಯ ರಕ್ಷಣೆಗೆ ನಾವು ಕಾನೂನಿನಡಿ ಓಪನ್ ಅನೌನ್ಸ್ಮೆಂಟ್ ಮಾಡಿದ್ದೇವೆ. ಆಕೆ ಕೂಡ ನನಗೆ ರಕ್ಷಣೆ ಬೇಕೆಂದು ಬಹಿರಂಗವಾಗಿಯೇ ಒಂದು ವಿಡಿಯೋ ಬಿಡುಗಡೆ ಮಾಡಿದ್ದಳು. ಹಾಗೆಯೇ ಬಂದು ಒಂದು ಲಿಖಿತ ದೂರು ಬರೆದು ಕಳುಹಿಸಿದ್ದಾರೆ. ಹೀಗಾಗಿ ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಅವರಿಗೆ ಇಂದು ಮಧ್ಯಾಹ್ನ 2.30 ಕ್ಕೆ ಆ ದೂರಿನ ಪ್ರತಿ ತಲುಪಿಸುತ್ತೇವೆ. ಅಲ್ಲದೆ ಅದರ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯಿಸುತ್ತೇವೆ ಎಂದು ಜಗದೀಶ್ ಹೇಳಿದರು.

ಮುಂದೆ ಕಮಿಷನರ್ ಆಫೀಸ್‌ನಲ್ಲಿ ಏನೇನು ಬೆಳವಣಿಗೆಗಳು ಆಗುತ್ತದೆ ಎಂಬುದನ್ನು ನಿಮಗೆ ತಿಳಿಸುತ್ತೇವೆ. ಆಕೆಯ ಪೋಷಕರಿಗೆ ರಕ್ಷಣೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಪೊಲೀಸರು ಎಸ್ಐಟಿ ಮತ್ತು ಯಡಿಯೂರಪ್ಪ ಸರ್ಕಾರ ನ್ಯಾಯ ಕೊಡಲಿದೆ ಎಂದು ಭಾವಿಸಿದ್ದೇವೆ. ರಕ್ಷಣೆ ಕೊಟ್ಟರೆ ಆಕೆ ಪೊಲೀಸರ ಮುಂದೆ ಬಂದು ಹೇಳಿಕೆ ದಾಖಲಿಸುತ್ತಾರೆ ಎಂದು ಜಗದೀಶ್ ತಿಳಿಸಿದರು.

ಸಂತ್ರಸ್ತ ಯುವತಿಯ ಮೂರನೇ ವಿಡಿಯೋ….?
ಕರ್ನಾಟಕದ ಜನತೆ, ತಂದೆ-ತಾಯಿಯರ ಆಶೀರ್ವಾದ ಎಲ್ಲಾ ಪಕ್ಷದ ನಾಯಕರು ಹಾಗೂ ಎಲ್ಲಾ ಸಂಘಟನೆಯವರಿಂದ ನನಗೆ ತುಂಬಾನೇ ಬೆಂಬಲ ಸಿಗುತ್ತಿದೆ. 24 ದಿನದಿಂದ ನಾನು ಜೀವಭಯದಲ್ಲಿ ಬೆದರಿಕೆಗಳ ಭಯದಲ್ಲಿ ಬದುಕುತ್ತಿದ್ದೇನೆ. ಆದರೆ ಇಂದು ಎಲ್ಲೋ ಒಂದು ಕಡೆಯಿಂದ ಧೈರ್ಯ ಬಂದಿದೆ ಆ ದೈರ್ಯ ಬಂದಿರುವುದಕ್ಕೆ, ನನ್ನನ್ನು ಎಲ್ಲರೂ ಬೆಂಬಲಿಸುತ್ತಾ ಇದ್ದೀರಾ ಅನ್ನೋ ಕಾರಣಕ್ಕೆ ಇಂದು ನಾನು ನನ್ನ ವಕೀಲರ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ಯುವತಿ ಬಿಡುಗಡೆ ಮಾಡಿರುವ ಮೂರನೇ ವಿಡಿಯೋದಲ್ಲಿ ಹೇಳಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ