NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ ಜಾಗ್ರತಾ ವಿಭಾಗದ ನಿರ್ದೇಶಕ ಡಾ. ಅರುಣ್‌ ಎತ್ತಂಗಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿಯ ಭದ್ರತಾ ಮತ್ತು ಜಾಗ್ರತಾ ವಿಭಾಗದ (S&V) ನಿರ್ದೇಶಕರಾಗಿದ್ದ ಡಾ. ಅರುಣ್‌ ಕೆ. ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ.

ಡಾ. ಅರುಣ್‌ ಕೆ. ಅವರನ್ನು ಹೊಸ ಜಿಲ್ಲೆಯಾಗಿರುವ ವಿಜಯನಗರ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಅದೇಶ ಹೊರಡಿಸಿದೆ.

ಮುಷ್ಕರದ ಸಮಯಲ್ಲಿ ಬಿಎಂಟಿಸಿಯ ನೌಕರರನ್ನು ಮನಸೋಯಿಚ್ಚೆ ವಜಾ, ಅಮಾನತು ಮಾಡುವ ಮೂಲಕ ಐಪಿಎಸ್ ಅಧಿಕಾರಿ ಡಾ.ಅರುಣ್‌ ಅವರು ನೌಕರರ ಕೆಂಗಣ್ಣಿಗೆ ಗುರಿಯಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ, ರಜೆ ಮೇಲೆ ತೆರಳಿದ್ದ ನೂರಾರು ನೌಕರರನ್ನು ವಜಾ ಅಮಾನತು ಮಾಡುವ ಮೂಲಕ ಒಂದು ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದರು ಎಂಬ ಆರೋಪವು ಈ ಅಧಿಕಾರಿಯ ವಿರುದ್ಧ ಕೇಳಿ ಬಂದಿತ್ತು.

ಇನ್ನು ಪ್ರಮುಖವಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಒಂದು ಕಡೆ ಮುಷ್ಕರದ ಸಮಯದಲ್ಲಿ ನೌಕರರ ವಿರುದ್ಧ ತೆಗೆದುಕೊಂಡಿರುವ ಎಲ್ಲ ಪ್ರಕರಣಗಳನ್ನು ವಾಪಸ್‌ ಪಡೆಯುತ್ತೇವೆ ಎಂದು ಭರವಸೆ ನೀಡುತ್ತಿದ್ದರೆ. ಇತ್ತ ಬಿಎಂಟಿಸಿಯಲ್ಲಿ ಅಮಾನತುಗೊಂಡಿದ್ದ 57 ನೌಕರರನ್ನು ಏಕಾಏಕಿ ಇದೇ ಸೆ.27 ರಂದು ವಜಾ ಮಾಡಿ ಆದೇಶ ಹೊರಡಿಸುವ ಮೂಲಕ ಸರ್ಕಾರ ಮತ್ತು ಸಚಿವರು ಮುಜುಗರಕ್ಕೆ ಒಳಗಾಗುವಂತೆ ಮಾಡಿದ್ದರು.

ಅರುಣ್‌ ಅವರ ಈ ನಡೆಯಿಂದ ಸರ್ಕಾರ ಮಾಧ್ಯಮಗಳ ಮುಂದೆ ಮುಜುಗರಕ್ಕೆ ಸಿಲುಕಿಕೊಂಡಿತ್ತು. ಸಿಎಂ ಮತ್ತು ಸಚಿವರ ಆದೇಶಕ್ಕೂ ಕಿಮ್ಮತ್ತಿಲ್ಲದಂತಾಗಿದೆ ಎಂದು ಬಹುತೇಕ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಎಲ್ಲ ಬೆಳವಣಿಗೆಯ ನಡುವೆ ಇಂದು ಡಾ. ಅರುಣ್‌ ಕೆ. ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1 Comment

  • ಉತ್ತಮ ಬೆಳವಣಿಗೆ ಘನ ರಾಜ್ಯ ಸಚಿವರು ಪಕ್ಷತೀತವಾಗಿ ಯಾವುದೇ ಪ್ರಭಾವಕ್ಕೊಳಗಾಗದೇ ಈ ತರಹ ನ್ಯಾಯಯುತ ನಿರ್ಧಾರ ತೆಗೆದುಕೊಂಡರೆ ಸರ್ಕಾರಕ್ಕೂ ಹಾಗೂ ಈ ಸಮಾಜಕ್ಕೆ ಉತ್ತಮ ಬೆಳವಣಿಗೆಯೆಂದು ಭಾವಿಸಬೇಕು

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ