NEWSನಮ್ಮಜಿಲ್ಲೆರಾಜಕೀಯ

ಬೆಂಗಳೂರು ರಸ್ತೆ ಗುಂಡಿ: ಎಎಪಿಯಿಂದ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಆಮ್‌ ಆದ್ಮಿ ಪಾರ್ಟಿ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಶನಿವಾರ ಚಾಲನೆ ನೀಡಿದರು.

ತೆರೆದ ವಾಹನವನ್ನು ಬಳಸಿಕೊಂಡು ಬೆಂಗಳೂರಿನಾದ್ಯಂತ ಜನಜಾಗೃತಿಗೆ ಆಮ್‌ ಆದ್ಮಿ ಪಾರ್ಟಿ ಮುಂದಾಗಿದ್ದು, ಮೊದಲ ದಿನವಾದ ಇಂದು ವಾಹನವು ಗಾಂಧಿನಗರ, ಮಲ್ಲೇಶ್ವರಂ, ರಾಜಾಜಿನಗರ, ಚಿಕ್ಕಪೇಟೆ ಮಾರ್ಗದಲ್ಲಿ ಸಾಗಿ ಆರ್ಮುಗಂ ವೃತ್ತ ತಲುಪಿತು.

ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣ ಸಮೀಪದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಪೃಥ್ವಿ ರೆಡ್ಡಿ, ಸರ್ಕಾರದ ಬೊಕ್ಕಸದಿಂದ ಬರೋಬ್ಬರಿ 20 ಸಾವಿರ ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಖರ್ಚಾಗಿದ್ದರೂ ಬೆಂಗಳೂರಿನ ರಸ್ತೆಗಳ ತುಂಬಾ ಗುಂಡಿಗಳಿವೆ. ಇದರಿಂದಾಗಿ ಅಮಾಯಕ ವಾಹನ ಸವಾರರು ಕೈಕಾಲು ಮುರಿದುಕೊಂಡು ಜೀವ ಕಳೆದುಕೊಳ್ಳುತ್ತಿದ್ದಾರೆ.

ಇತ್ತ ಸಂಚಾರ ದಟ್ಟಣೆ ಸಮಸ್ಯೆಗೂ ಗುಂಡಿಗಳು ಕಾರಣ. ರಸ್ತೆ ಕಾಮಗಾರಿಗಳಲ್ಲಾದ ಅಕ್ರಮವನ್ನು ಹತ್ತು ದಿನಗಳ ಸಹಿ ಸಂಗ್ರಹ ಅಭಿಯಾನದ ಮೂಲಕ ಮನೆಮನೆಗೆ ತಲುಪಿಸಿ ಜಾಗೃತಿ ಮೂಡಿಸುತ್ತೇವೆ. ಸರ್ಕಾರ ಮಾಡಿರುವ ಈ ಅನ್ಯಾಯದ ವಿರುದ್ಧ ಜನತಾ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, ಸಹಿ ಸಂಗ್ರಹ ಅಭಿಯಾನವು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳ ಮೂಲೆಮೂಲೆಯನ್ನು ತಲುಪಲಿದೆ. ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ವಿರುದ್ಧ ಜನಜಾಗೃತಿ ಮೂಡಿಸಿ, ಸರ್ಕಾರ ಮೇಲೆ ಒತ್ತಡ ಹಾಕಲು ಪ್ರಯತ್ನಿಸುತ್ತೇವೆ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ರಸ್ತೆ ಗುಂಡಿಗಳಿಗೆ ಸಂಬಂಧಿಸಿ ನಾವು ಈ ಹಿಂದೆ ಮಾಡಿದ್ದ ಪ್ರತಿಭಟನೆಗಳು, ರಸ್ತೆಗುಂಡಿ ಹಬ್ಬ ಎಂಬ ವಿನೂತನ ಅಭಿಯಾನ, ಸೋಶಿಯಲ್‌ ಮೀಡಿಯಾ ಚಳವಳಿಗೆ ಉತ್ತಮ ಜನಬೆಂಬಲ ವ್ಯಕ್ತವಾಗಿದೆ. ಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ 70ಕ್ಕೂ ಹೆಚ್ಚು ದೂರುಗಳನ್ನು ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದೇವೆ. ಅದೇ ರೀತಿ, ಈ ಚಳವಳಿಗೆ ಕೂಡ ಹೆಚ್ಚಿನ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಮುಖಂಡರಾದ ಬಿ.ಟಿ.ನಾಗಣ್ಣ, ಸುರೇಶ್‌ ರಾಥೋಡ್‌, ಜಗದೀಶ್‌ ಚಂದ್ರ, ಉಷಾ ಮೋಹನ್‌, ಪಲ್ಲವಿ ಚಿದಂಬರಂ, ಅಶೋಕ್‌ ಮೃತ್ಯುಂಜಯ. ವಿಜಯ್‌ ಶಾಸ್ತ್ರಿಮಠ್‌ ಹಾಗೂ ಇನ್ನಿತರ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

 

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ