NEWSನಮ್ಮಜಿಲ್ಲೆ

ಮಳೆಗೂ ಮುನ್ನ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಹಲವಾರು ಕಡೆ ಸಮಸ್ಯೆಗಳಾಗಿವೆ. ಈ ಸಂಬಂಧ ಮಳೆ ಬೀಳುವ ಮುನ್ಸೂಚನೆಯಿದ್ದರೆ ಎಲ್ಲಾ ಅಧಿಕಾರಿಗಳು ಕೂಡಲೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಚುರುಕಾಗಿ ಕೆಲಸ ಮಾಡಿ ಯಾವುದೇ ಸಮಸ್ಯೆ ಉದ್ಭವಿಸದಂತೆ ಕ್ರಮವಹಿಸಬೇಕೆಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಭಾನುವಾರ ರಾತ್ರಿ ಬಿದ್ದ ಮಳೆ ಸಂಬಂಧ ಅ.4ರಂದು(ನಿನ್ನೆ ರಾತ್ರಿ) ವರ್ಚುವಲ್ ಮೂಲಕ ಪರಿಶೀಲನಾ ಸಭೆ ನಡೆಸಿದರು. ಭಾನುವಾರ ರಾತ್ರಿ ಬಿದ್ದ ಮಳೆಯಿಂದಾಗಿ ನಗರದಲ್ಲಿ ಹಲವಾರು ಸಮಸ್ಯೆಗಳು ಉದ್ಭವಿಸಿವೆ.

ದಕ್ಷಿಣ ವಲಯದಲ್ಲಿ ಮರ ಬಿದ್ದು ಒಬ್ಬರು ಮೃತಪಟ್ಟಿದ್ದು, ರಾಜರಾಜೇಶ್ವರಿ ನಗರ ವಲಯದಲ್ಲಿ ಜಾನುವಾರುಗಳು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿರುವುದು ಹಾಗೂ ಕೆಲ ವಾರ್ಡ್ ಗಳಲ್ಲಿ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.

ಈ ಸಂಬಂಧ ಎಲ್ಲೆಲ್ಲಿ ಸಮಸ್ಯೆಗಳಾಗಿವೆ, ಎಷ್ಟು ಮನೆಗಳಿಗೆ ನೀರು ನುಗ್ಗಿವೆ ಎಂಬುದನ್ನು ಕಂದಾಯ ಅಧಿಕಾರಿಗಳು ತ್ವರಿತವಾಗಿ ಸಮೀಕ್ಷೆ ನಡೆಸಿ ವಿಪತ್ತು ನಿರ್ವಹಣೆಯಡಿ ಮಳೆಯಿಂದಾದ ನಷ್ಟಕ್ಕೆ ತಕ್ಕಂತೆ ಪರಿಹಾರ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದ ಸಮಯದಲ್ಲಿ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಾಗರೀಕರಿಂದ ದೂರು ಬಂದ ತಕ್ಷಣ ಸಮಸ್ಯೆಗಳನ್ನು ಬಗೆಹರಿಸಬೇಕು. ರಾತ್ರಿ ವೇಳೆ ಮಳೆ ಬೀಳುವ ಸಮಯದಲ್ಲಿ ಮರಗಳನ್ನು ತೆರವುಗಳಿಸಲು ಹೆಚ್ಚುವರಿ ತಂಡಗಳನ್ನು ನಿಯೋಜನೆ ಮಾಡಬೇಕು.

ಎಲ್ಲಾದರು ಮರ ಬಿದ್ದ ಕೂಡಲೆ ಮರ ತೆರವುಗೊಳಿಸುವ ತಂಡ ಸ್ಥಳಕ್ಕೆ ತೆರಳಿ ಬಿದ್ದಿರುವ ಮರ/ರೆಂಬೆ/ಕೊಂಬೆಗಳನ್ನು ತೆರವುಗೊಳಿಸಬೇಕು. ಈ ಸಂಬಂಧ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕೆಲಸ ಮಾಡಲು ಸೂಚನೆ ನೀಡಿದರು.

ನಗರದ ಹೊರ ವಲಯಗಳಲ್ಲಿ ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಿಸದೇ ಇರುವ ಕಡೆ ಜೋರು ಮಳೆಯಾಗಿ ನೀರಿನ ಮಟ್ಟ ಹೆಚ್ಚಾಗಿ ಮನೆಗಳಿಗೆ ನೀರು ನುಗ್ಗುತ್ತಿರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ತಡೆಗೋಡೆ ನಿರ್ಮಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದರು.

ಮಳೆಗಾಲದ ವೇಳೆ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ರಾಜಕಾಲುವೆಯಲ್ಲಿ ನೀರಿನ ಮಟ್ಟ ಹೆಚ್ಚಾದಾಗ ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಈ ಸಂಬಂಧ ತಗ್ಗುಪ್ರದೇಶಗಳಲ್ಲಿ ನೀರು ನುಗ್ಗುವ ಸ್ಥಳಗಳನ್ನು ಗುರುತಿಸಿ ನೀರು ಹೋಗದಂತೆ ಕ್ರಮ ಕೈಗೊಳ್ಳಬೇಕು.

ನಿಂತಿರುವ ನೀರನ್ನು ಪಂಪ್‌ಗಳ ವ್ಯವಸ್ಥೆ ಮಾಡಿಕೊಂಡು ಕೂಡಲೆ ತೆರವು ಮಾಡಬೇಕು. ಎಲ್ಲಿಯೂ ಯಾವುದೇ ಸಮಸ್ಯೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ