NEWSನಮ್ಮಜಿಲ್ಲೆ

ಬಿಬಿಎಂಪಿ: ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೇ12ರಿಂದ ಉಚಿತ ಆಹಾರ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ನಾಳೆಯಿಂದ ( ಮೇ 12) ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು (ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದ್ದಾರೆ.

ಮೇ 12 ರಿಂದ 24 ಲಾಕ್‌ಡೌನ್ ಅವಧಿ ಮುಗಿಯುವವರೆಗೆ ಉಚಿತವಾಗಿ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತದೆ. ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನ ಚೀಟಿ(ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಡಿಎಲ್, ಕಾರ್ಮಿಕ ಇಲಾಖೆಯ ಗುರುತಿನ ಚೀಟಿ ಸೇರಿದಂತೆ ಇನ್ನಿತ್ಯಾದಿ ಗುರುತಿನ ಚೀಟಿಗಳು) ಸರಬರಾಜುದಾರರಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ಫಲಾನುಭವಿಗಳಿಗೂ ಗರಿಷ್ಠ 3 ಆಹಾರದ ಪೊಟ್ಟಣಗಳನ್ನು ನೀಡಲಾಗುವುದು ಅಥವಾ ಪಡಿತರ ಚೀಟಿಯಲ್ಲಿ ಕುಟುಂಬದ ಒಟ್ಟು ವ್ಯಕ್ತಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರದ ಪ್ಯಾಕೆಟ್‌ಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ನಗರದ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಆಹಾರ ಪೊಟ್ಟಣಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ